ಬಾನದಾರಿಯಲ್ಲಿ ಮತ್ತು ದಿ ಸ್ಟೋರಿ ಆಫ್ ರಾಯಘಡ ಸಿನಿಮಾ ಜೊತೆಗೆ ಸದ್ದಿಲ್ಲದೆ ಶುರುವಾಗಿದೆ ಕೃಷ್ಣಂ ಪ್ರಣಯ ಸಖಿ. ಹೆಸರು ವಿಭಿನ್ನವಾಗಿದೆ. ಡೈರೆಕ್ಟರ್ ಶ್ರೀನಿವಾಸ ರಾಜು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) 41ನೇ ಸಿನಿಮಾ ಇದು.
ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕಾ ನಾಯರ್ (Malavika Nair) ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ (Sudharani), ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು ಕೃಷ್ಣಂ ಪ್ರಣಯ ಸಖಿ ಚಿತ್ರದಲ್ಲಿ ನಟಿಸಿದ್ದಾರೆ.
ತ್ರಿಶೂಲ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ (Arjun Janya) ಈ ಚಿತ್ರದ ಸಂಗೀತ ನಿರ್ದೇಶಕರು. ಗಣೇಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾ ಪೋಸ್ಟರ್ ರಿಲೀಸ್ ಆಗಿದೆ.


