ರಾಜ್ಯ ಸರ್ಕಾರ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ (Rashtra Rakshana Pade) ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ (Gunda Act) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು (CCB Police) ಆತನನ್ನು ಬಂಧಿಸಿದ್ದಾರೆ. ಶುಕ್ರವಾರ ತಡರಾತ್ರಿ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
32 ವರ್ಷದ ಈತ (Puneeth Kerehalli) ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿದ್ದು, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ನಡೆಸುತ್ತಿದ್ದು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದರು. ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್ಗೆ ತಿಳಿವಳಿಕೆ ನೋಟಿಸ್ ಜಾರಿ ಮಾಡಿದ್ದರು.
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ಮೇಲೆ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ನನಗೆ ವಿವರಣೆ ಸಲ್ಲಿಸಬಹದು. ಇಲ್ಲದಿದ್ದರೆ ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು’ ಎಂದು ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು, ಪುನೀತ್ಗೆ ಜಾರಿಗೊಳಿಸಿರುವ ನೋಟಿಸ್ನಲ್ಲಿ ಉಲ್ಲೇಖಿಸಿದ್ದರು.
ಗೂಂಡಾ ಕಾಯ್ದೆಯಲ್ಲಿ ಬಂಧಿಸಲಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯವು ಇರುವುದಿಲ್ಲ. ಪೊಲೀಸ್ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದು. ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿತನಾದಲ್ಲಿ ಅಪರಾಧಿಗೆ ನ್ಯಾಯಾಲಯದಲ್ಲಿ ಒಂದು ವರ್ಷ ಜಾಮೀನು ಸಿಗುವುದಿಲ್ಲ.
ಇದೇ ವೇಳೆ ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ (DJ Halli, KJ Halli) ನಡೆದ ಗಲಭೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ `ಅಮಾಯಕ’ (Innocents)ರ ಪತ್ತೆಗೆ ಸಮಿತಿ ರಚನೆಯಾಗಿದೆ. ಗೃಹ ಸಚಿವರೂ ಆಗಿರುವ ಡಾ.ಜಿ. ಪರಮೇಶ್ವರ್ (Home Minister Dr.G Parameshwar) ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚನೆಯಾಗಿದೆ. ಸಮಿತಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ(Ramalinga reddy) , ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ(HC Mahadevappa) ಸೇರಿದಂತೆ ಇತರರೂ ಇದ್ದಾರೆ. ಒಂದು ಸಭೆಯೂ ನಡೆದಿದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ 2020ರ ಆಗಸ್ಟ್ 11ರಂದು ಗಲಭೆಯಾಗಿತ್ತು. ನವೀನ್ ಎಂಬಾತ ಹಾಕಿದ್ದ ಅವಹೇಳನಕಾರಿ ಪೋಸ್ಟ್`ನಿಂದ ಗಲಭೆ ಸೃಷ್ಟಿಯಾಗಿತ್ತು. ನವೀನ್ ಆಗ ಕಾಂಗ್ರೆಸ್‍ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿಕರಾಗಿದ್ದರು. (ಅಖಂಡ ಶ್ರೀನಿವಾಸ ಮೂರ್ತಿ (Akhanda Srinivasa Murthy) ಅವರೀಗ ಕಾಂಗ್ರೆಸ್ಸಿನಲ್ಲಿ ಇಲ್ಲ. ಆದರೆ ಆರೋಪಿ ಸಂಪತ್ ರಾಜ್ ಈಗಲೂ ಕಾಂಗ್ರೆಸ್ಸಿನಲ್ಲಿಯೇ ಇದ್ದಾರೆ.) ಹೀಗಾಗಿ ಅಖಂಡ ಅವರ ಮನೆಯನ್ನು ಸಂಪೂರ್ಣ ಸುಟ್ಟುಹಾಕಲಾಗಿತ್ತು. ಈಗ ಈ ಪ್ರಕರಣದಲ್ಲಿ `ಅಮಾಯಕ’ರನ್ನು ಪತ್ತೆ ಮಾಡುವ ಹೊಣೆಗಾರಿಕೆ ಸಂಪುಟ ಉಪ ಸಮಿತಿಯದ್ದಾಗಿದೆ.
ಪರಮೇಶ್ವರ್ ಈ ಬಗ್ಗೆ ಬಹಿಂಗ ಹೇಳಿಕೆ ಕೊಟ್ಟಿದ್ದರು. ಅದನ್ನು ಬಿಜೆಪಿ ವಿರೋಧಿಸಿತ್ತು ಕೂಡಾ. ಆದರೆ ಪರಮೇಶ್ವರ್ ಇಚ್ಚಾಶಕ್ತಿ ಆಧರಿಸಿ ಹೆಜ್ಜೆ ಇಟ್ಟಿದ್ದಾರೆ.



