ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಕೇಸಿಗೆ ಸಂಬಂಧಿಸಿದ ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಒಟ್ಟು 2000 ಪುಟಗಳ ಚಾರ್ಜ್‌ಶೀಟ್. ಹಾಸನ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಸದ್ಯ 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಇನ್ನೂ ವಿಚಾರಣೆ ವಾದ ಪ್ರತಿವಾದ ನಡೆದು ತೀರ್ಪು ಬರಬೇಕು.
ಚಾರ್ಜ್ʻಶೀಟ್ ಪ್ರಕಾರ..
ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಮಾಡುತ್ತಿದ್ದರು.
ಹಣ್ಣುಕೊಡುವ ನೆಪದಲ್ಲಿ ಸೊಂಟ ಚಿವುಟುತ್ತಿದ್ದರು. ಸೀರೆ ಎಳೆಯುತ್ತಿದ್ದರು
ಪುತ್ರ ಪ್ರಜ್ವಲ್ ರೇವಣ್ಣ ಹೊಳೆನರಸೀಪುರ, ಬೆಂಗಳೂರಿನ ಬಸವನಗುಡಿ ಮನೆಗಳಲ್ಲಿ ಅತ್ಯಾಚಾರ ನಡೆಸಿದ್ದಾರೆ. ಹೊತ್ತಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯನ್ನು ಹೆದರಿಸಿ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾರೆ.
ಮನೆ ಕೆಲಸ ಮಾಡಿ ಸುಸ್ತಾಗಿ ಮಲಗಿದ್ದರೂ ಬೆದರಿಸಿ ಲೈಂಗಿಕ ಸಂಪರ್ಕ ಸಾಧಿಸುತ್ತಿದ್ದರು.
ಒಟ್ಟಾರೆ 123 ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ.
ಪ್ರಕರಣದಲ್ಲಿ ಇದುವರೆಗೆ ರೇವಣ್ಣ ಅರೆಸ್ಟ್ ಆಗಿ ಜಾಮೀನು ಮೇಲೆ ಹೊರಬಂದಿದ್ದಾರೆ. ಪ್ರಜ್ವಲ್ ರೇವಣ್ಣ ಈಗಲೂ ಜೈಲಿನಲ್ಲೇ ಇದ್ದಾರೆ. ಭವಾನಿ ರೇವಣ್ಣ ಅವರು ಜಾಮೀನು ಪಡೆದಿದ್ದ ಕಾರಣ ಅರೆಸ್ಟ್ ಆಗಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಗುರುವಾರ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಪತ್ನಿ ಭವಾನಿ ಸೇರಿದಂತೆ 9 ಆರೋಪಿಗಳಿಗೆ ಆ.28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಪ್ರಕರಣದಲ್ಲಿ ಬಂಧಿತರಾಗಿರುವ ಸತೀಶ್‌ಬಾಬು, ಮನುಗೌಡ, ಕೆ.ಎ. ರಾಜಗೋಪಾಲ್ ಎಚ್.ಕೆ. ಸುಜಯ್, ಎಚ್.ಎನ್. ಮಧು, ಎಸ್.ಟಿ. ಕೀರ್ತಿ ಮತ್ತು ಅಜಿತ್ ಕುಮಾರ್‌ಗೆ ಐಪಿಸಿ ಸೆಕ್ಷನ್ 364 ‘ಎ’ ಕೈಬಿಟ್ಟು ಉಳಿದ ಆರೋಪಿಗಳಿಗೆ ಸಮನ್ಸ್ ನೀಡಲಾತ್ತು.
ಎಸ್‌ಐಟಿ ತಂಡದ ಪೊಲೀಸರು ಈ ಪ್ರಕರಣದ ಬಗ್ಗೆ ಹಾಸನದ ಮನೆ, ಬೆಂಗಳೂರಿನ ಮನೆ ಸೇರಿದಂತೆ ಎಲ್ಲೆಡೆ ಸ್ಥಳ ಮಹಜರು ಮಾಡಿ, ಆರೋಪಿಗಳು ಮತ್ತು ದೂರುದಾರರನ್ನು ಸೂಕ್ತ ವಿಚಾರಣೆ ಮಾಡಿ ತನಿಖೆ ಮುಗಿಸಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದು ಸುಮಾರು 2 ಸಾವಿರ ಪುಟಗಳನ್ನು ಹೊಂದಿದ್ದು, ಆರೋಪಿಗಳ ವಿರುದ್ಧ ಬರೋಬ್ಬರಿ 123 ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಎಸ್‌ಐಟಿ ತಂಡದಿಂದ 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಮೊದಲ ಕೇಸಿನ ಚಾರ್ಜ್ ಶೀಟ್ ಇದಾಗಿದೆ.
ಆತ್ಯಾಚಾರ ಕೇಸ್ ದಾಖಲಾಗುತ್ತಿದ್ದಂತೆ ವಿದೇಶಕ್ಕೆ ಹೋಗಿದ್ದ ಪ್ರಜ್ವಲ್ ವಾಪಸ್ ಬರದೇ ತಲೆಮರೆಸಿಕೊಂಡಿದ್ದನು. ಆದರೆ, ಪೊಲೀಸರು ಎಲ್ಲಿದ್ದರೂ ತಮ್ಮನ್ನು ಬಂಧಿಸುವುದಾಗಿ ನೊಟೀಸ್ ನೀಡಿದ ಬೆನ್ನಲ್ಲಿಯೇ ವಿದೇಶದಿಂದ ಬಂದು ಪೊಲೀಸರಿಗೆ ಶರಣಾಗಿದ್ದನು. ಇದಾದ ನಂತರ ನಿರಂತರ ವಿಚಾರಣೆ ಮಾಡಿದ ಎಸ್‌ಐಟಿ ತಂಡವು ಈಗ ಅಪ್ಪ ರೇವಣ್ಣ ಹಾಗೂ ಮಗ ಪ್ರಜ್ವಲ್ ವಿರುದ್ಧ ಚಾರ್ಜ್ ಶೀಟ್ ಸಿದ್ಧಪಡಿಸಿ ಸಲ್ಲಿಕೆ ಮಾಡಿದೆ.



