ರಾಜ್ಯ ಸರ್ಕಾರ State government ಗ್ಯಾರಂಟಿ ಯೋಜನೆಗಳನ್ನೇನೋ gurantee scheme ಶುರು ಮಾಡಿದೆ. ಆದರೆ ಗೃಹಲಕ್ಷ್ಮಿ ಯೋಜನೆಗೆ Gruhalakshmi scheme ರೇಷನ್ ಕಾರ್ಡ್ Ration card ಕಡ್ಡಾಯ. ಶಕ್ತಿ ಮತ್ತು ಗೃಹ ಜ್ಯೋತಿ ಯೋಜನೆಗೆ ಆಧಾರ್ ಕಾರ್ಡ್ Adhar card ಕಡ್ಡಾಯ. ಆದರೆ ಅಲ್ಲಿಯೇ ಇರೋದು ಸಮಸ್ಯೆ. ಗೃಹಲಕ್ಷ್ಮಿ ಹಣ ಬರಬೇಕಾದರೆ ಅರ್ಜಿ ಸಲ್ಲಿಕೆ ಮೊದಲು ಆಧಾರ್ ಕಾರ್ಡ್ನಲ್ಲಿ ಮೊಬೈಲ್ ನಂಬರ್ mobile number, ವಿಳಾಸ ಅಪ್ಡೇಟ್ address update ಮಾಡಿರಬೇಕು. ಬ್ಯಾಂಕ್ ಖಾತೆಯಲ್ಲಿರುವ bank account ಅರ್ಜಿದಾರರ ಹೆಸರು, ಆಧಾರ್ ಹೆಸರು, ಪಡಿತರ ಚೀಟಿ ಹೆಸರು ಒಂದೇ ರೀತಿಯಲ್ಲಿರಬೇಕು. Bpl apl card ಪಡಿತರ ಚೀಟಿಗೆ ಕೆವೈಸಿ BPL card KYC ಆಗಿರಬೇಕು. ಸಾಮಾನ್ಯವಾಗಿ ಈ ಎಲ್ಲ ಪ್ರಕ್ರಿಯೆಗಳ ಬಳಿಕವೇ ಅರ್ಜಿ ಸ್ವೀಕಾರವಾಗಿರುತ್ತದೆ. ಮುಖ್ಯವಾಗಿ ಬ್ಯಾಂಕ್ ಅಕೌಂಟ್ಗೆ ಆಧಾರ್ನ್ನು ಎನ್ಪಿಸಿಐಗೆ ಸೀಡಿಂಗ್ ಮಾಡಿರಬೇಕು. ಇದನ್ನು ಮಾಡಿದರೆ ಮಾತ್ರ ಯೋಜನೆಯ 2 ಸಾವಿರ ರು. ಹಣ ಬರುತ್ತದೆ. ಅರ್ಜಿ ಹಾಕುವಾಗ ಆಧಾರ್ ಸೀಡಿಂಗ್ ಆಗದೆ ಇರುವುದರಿಂದಲೇ ಹೆಚ್ಚಿನವರಿಗೆ ಹಣ ತಲುಪಿಲ್ಲ. ಅರ್ಜಿ ಹಾಕಿದ ಮಹಿಳೆಯರು ಹಣ ಬಾರದೆ ಇರುವುದಕ್ಕೆ ಏನು ಕಾರಣ, ಅದಕ್ಕೆ ಅಗತ್ಯವಾಗಿ ಮಾಡಬೇಕಾದ ಪ್ರಕ್ರಿಯೆಗಳೇನು ಎಂಬುದೇ ತಿಳಿಯದೆ ಗ್ರಾಮ ಒನ್ Grama ond ಕೇಂದ್ರಗಳು, ಬ್ಯಾಂಕ್- ಅಂಚೆ ಕಚೇರಿಗಳು Bank – post office, ಗ್ರಾಮ ಕಚೇರಿಗಳಿಗೆ ನಿತ್ಯವೂ ಅಲೆದಾಡಿ ರೋಸಿಹೋಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಒಂದು ಹೊಸ ಅವಕಾಶ ನೀಡಿದೆ. ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ.5ರಿಂದ 13ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ. ಬೆಂಗಳೂರು ವಲಯದ ಜಿಲ್ಲೆಗಳಲ್ಲಿ ಅ.5ರಿಂದ 7ರವರೆಗೆ, ಕಲಬುರಗಿ ವಲಯದಲ್ಲಿ ಅ.8ರಿಂದ 10ರವರೆಗೆ ಮತ್ತು ಬೆಳಗಾವಿ ವಲಯದಲ್ಲಿ ಅ.11ರಿಂದ 13ರವರೆಗೆ ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ರದ್ದು ಮತ್ತು ಸೇರ್ಪಡೆ, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ, ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.
ಬೆಂಗಳೂರು ಒನ್ Bengaluru one, ಕರ್ನಾಟಕ ಒನ್ Karnataka one , ಗ್ರಾಮ ಒನ್ grama one ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ 7 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸೆ.9ರಿಂದ 14ರವರೆಗೆ ಆಹಾರ ಇಲಾಖೆಯು ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದರೆ, ಸರ್ವರ್ಡೌನ್ ಆಗಿ ತಿದ್ದುಪಡಿ ಮಾಡಲು ಸಾಕಷ್ಟು ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಸೇವಾ ಕೇಂದ್ರದಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ರಾಜ್ಯದಲ್ಲಿ 1.10 ಕೋಟಿಗೂ ಅಧಿಕ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದಾರೆ. ಆದರೆ ಪ್ರತಿಯೊಂದು ಜಿಲ್ಲೆಯಲ್ಲೂ 10-15 ಸಾವಿರ ಮಂದಿಗೆ ಕಳೆದ ತಿಂಗಳ ಹಣ ತಲುಪಿಲ್ಲ. ಹಣ ಬರಬೇಕಾದರೆ ಅರ್ಜಿದಾರರು ಅಗತ್ಯವಾಗಿ ಮಾಡಬೇಕಾದ ಪ್ರಕ್ರಿಯೆಗಳನ್ನು ಪೂರೈಸಲು ಅಂಗನವಾಡಿ ಕಾರ್ಯಕರ್ತರ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಗ್ರಾಮೀಣ ಪ್ರದೇಶದ- ತಿಳುವಳಿಕೆ ಕಡಿಮೆ ಇರುವವರಿಗೆ ಇದು ಏನೆಂದೇ ಅರ್ಥವಾಗುತ್ತಿಲ್ಲ. ಹಾಗಾಗಿ ಬ್ಯಾಂಕ್ಗಳು, ಅಂಚೆ ಕಚೇರಿಗಳಿಗೆ ಎಡತಾಕುವುದು ನಿಂತಿಲ್ಲ.
ಈ ಹಿನ್ನೆಲೆಯಲ್ಲಿ ಬೆಂಗಳೂರು ವಲಯದ ಜಿಲ್ಲೆಗಳಲ್ಲಿ ಅ.5ರಿಂದ 7ರವರೆಗೆ, ಕಲಬುರಗಿ ವಲಯದಲ್ಲಿ ಅ.8ರಿಂದ 10ರವರೆಗೆ ಮತ್ತು ಬೆಳಗಾವಿ ವಲಯದಲ್ಲಿ ಅ.11ರಿಂದ 13ರವರೆಗೆ ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ರದ್ದು ಮತ್ತು ಸೇರ್ಪಡೆ, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ, ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಬೇಗನೆ ತಿದ್ದುಪಡಿ ಮಾಡಿಸಿ.



