ಆಟ ಈಗ ಶುರುವಾದಂತೆ ಕಾಣ್ತಾ ಇದೆ. ಸಿಎಂ ಸಿದ್ಧರಾಮಯ್ಯ ಅವರ ಅಧಿಕಾರಾವಧಿ ಎರಡೂವರೆ ವರ್ಷ ಕಂಪ್ಲೀಟ್ ಆಗಿದೆ. ಇಷ್ಟು ದಿನ ಒಂದು ಹಂತಕ್ಕೆ ಬ್ಯಾಲೆನ್ಸ್ ಹೇಳಿಕೆಗಳನ್ನೇ ಕೊಡ್ತಾ ಇದ್ದ ಡಿಕೆ ಸುರೇಶ್ ʻಸಿಎಂ ಸಿದ್ದರಾಮಯ್ಯ ಮಾತಿಗೆ ತಪ್ಪುವವರಲ್ಲʼ ಎನ್ನುವ ಮೂಲಕ ಮೊದಲ ಪಾನ್ ಬಿಟ್ಟಿದ್ದಾರೆ. ಅತ್ತ ದೆಹಲಿಗೆ ಡಿಕೆ ಶಿವಕುಮಾರ್ ಪರ ಒಂದು ತಂಡವೇ ದೆಹಲಿಗೆ ಹೋಗಿದೆ. ಆ ತಂಡದಲ್ಲಿ.. ಯಾರೆಲ್ಲ ಇದ್ದಾರೆ ಎಂದು ನೋಡಿದರೆ ಒಂದು ದೊಡ್ಡ ಸಂಚಲನ ಸೃಷ್ಟಿಯಾಗುವ ಸೂಚನೆ ಇದೆ.
ಡಿಕೆ ಸುರೇಶ್ ವಚನ :
ಸಿಎಂ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೇ ಮಾತು ಕೊಟ್ಟರೂ ತಪ್ಪುವುದಿಲ್ಲ. ಇದು ಡಿಕೆ ಸುರೇಶ್ ಮಾತು. ಸದಾಶಿವನಗರದ ತಮ್ಮ ನಿವಾಸದಲ್ಲೇ ಮಾತನಾಡಿದ ಸುರೇಶ್ ಸಿಎಂ ಅವರ ಬಳಿ ನಾನು ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರು ಹಿರಿಯ ನಾಯಕರು. ಅವರಿಗೆ ತಮ್ಮದೇ ಆದ ಜವಾಬ್ದಾರಿ ಇದೆ. ಕರ್ನಾಟಕದ ಜನರಿಗೆ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದಾರೆ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದಾರೋ ಅದರಂತೆ ನಡೆಯುತ್ತಿದ್ದಾರೆ ಎಂದಿದ್ದಾರೆ.
ಆದರೆ ಸಿದ್ದರಾಮಯ್ಯ ಕೊಟ್ಟಿದ್ದ ಮಾತು ಏನು..? ಅದನ್ನು ಮಾತ್ರ ಅಪ್ಪಿತಪ್ಪಿಯೂ ಹೇಳೋದಿಲ್ಲ. ಡಿ ಕೆ ಶಿವಕುಮಾರ್ ಅವರು ಎರಡೂವರೆ ವರ್ಷಗಳ ಬಳಿಕ ಸಿಎಂ ಆಗಬೇಕು ಎಂಬ ಒತ್ತಡ ಹೆಚ್ಚುತ್ತಿರುವ ಕುರಿತು ಕೇಳಿದರೂ ಅಷ್ಟೇ.. ಎಲ್ಲರಿಗೂ ಆ ಆಸೆ ಇದೆ. ಪಕ್ಷ ಏನು ಹೇಳುತ್ತದೆಯೋ ಅದನ್ನು ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ನಾಯಕರು ಪಾಲನೆ ಮಾಡುತ್ತಾರೆ. ಇದು ನಮ್ಮ, ನಿಮ್ಮ ಮುಂದೆ ನಡೆಯುವ ಚರ್ಚೆಯಲ್ಲ ಎಂದು ಹೇಳಿದ್ದಾರೆ.
ದೆಹಲಿಗೆ ಹೊರಟಿದೆ ಡಿಕೆ ಸಪೋರ್ಟರ್ಸ್ ಟೀಂ :
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು ಎಂದು ಒತ್ತಾಯಿಸಿ ಒಂದು ತಂಡ ದೆಹಲಿಗೆ ತಲುಪಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಾಗಡಿ ಶಾಸಕ ಬಾಲಕೃಷ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಅನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ದಾವಣಗೆರೆ ಜಿಲ್ಲೆಯ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಸೋನಿಯಾ, ರಾಹುಲ್ ಭೇಟಿಗೆ ಅವಕಾಶ ಕೊಡಿಸುವಂತೆ ಕೇಳಿದ್ದಾರೆ.
ನಂಗೇನೂ ಗೊತ್ತಿಲ್ಲ : ಡಿಕೆ ಶಿವಕುಮಾರ್
ಹಲಿಗೆ ಆಪ್ತ ಶಾಸಕರು ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಅಧಿಕಾರ ಹಂಚಿಕೆ ಬಗ್ಗೆ ನನಗೆ ತಿಳಿಯದು ಎಂದು ತಿಳಿಸಿದ್ದಾರೆ. ಇದರ ಜೊತೆಗೆ ಚಾಮರಾಜನಗರದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ನಾನು ಇನ್ನೂ ಗಟ್ಟಿಯಾಗಿದ್ದೇನೆ. ಇನ್ನೂ ಎರಡೂವರೆ ವರ್ಷ ಗಟ್ಟಿಯಾಗಿರುತ್ತೇನೆ ಎಂಬ ಹೇಳಿಕೆಗೂಇದೇ ರೀತಿ ಉತ್ತರ ಕೊಟ್ಟಿದ್ದಾರೆ ಡಿಕೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಹೇಳಿರುವ ಡಿಕೆ ದು ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, “ಬಹಳ ಸಂತೋಷ, ಅವರಿಗೆ ಮುಖ್ಯಮಂತ್ರಿ ಹುದ್ದೆ ಜವಾಬ್ದಾರಿಯನ್ನು ಪಕ್ಷ ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.



