Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ನಮ್ಮನ್ನು ಕರೆಯಲಿಲ್ಲ ಎಂದವರೂ ಕಾಂಗ್ರೆಸ್ಸಿಗರೇ.. ಕರೆದಾಗ ಹೋಗಲ್ಲ ಎಂದವರೂ ಕಾಂಗ್ರೆಸ್ಸಿಗರೇ..

SpeciallU by SpeciallU
January 12, 2024
in News, Politics
Reading Time: 1 min read
0 0
0
ನಮ್ಮನ್ನು ಕರೆಯಲಿಲ್ಲ ಎಂದವರೂ ಕಾಂಗ್ರೆಸ್ಸಿಗರೇ.. ಕರೆದಾಗ ಹೋಗಲ್ಲ ಎಂದವರೂ ಕಾಂಗ್ರೆಸ್ಸಿಗರೇ..

ಕೆಲವೇ ದಿನಗಳ ಹಿಂದೆ ಕಾಂಗ್ರೆಸ್ಸಿನ ನಾಯಕರೆಲ್ಲ ತಮಗೆ ರಾಮಮಂದಿರದ ಆಹ್ವಾನ ಪತ್ರಿಕೆ ಕೊಟ್ಟಿಲ್ಲ. ಆಮಂತ್ರಣ ಕೊಟ್ಟಿಲ್ಲ ಎಂದು ಹೇಳಿಕೆ ರಾಜಕೀಯ ಮಾಡಿದ್ದರು. ಈ ವಿಷಯದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲಾದ ನಾಯಕರು ಬಹಿರಂಗ ಹೇಳಿಕೆ ಕೊಟ್ಟಿದ್ದರು. ರಾಮಮಂದಿರದ ಬಾಗಿಲು ತೆರೆಸಿದ್ದೇ ಕಾಂಗ್ರೆಸ್ಸಿನ ರಾಜೀವ್‌ ಗಾಂಧಿ ಎಂಬ ಮಾತನ್ನೂ ಆಡಿದ್ದರು. ಮಂತ್ರಾಕ್ಷತೆ ನಮ್ಮ ಸರ್ಕಾರದ ಅನ್ನ ಭಾಗ್ಯದ ಅಕ್ಕಿಯಿಂದಲೇ.. ಎಂದು ಹೇಳಿಕೆ ನೀಡಿದ್ದರು. ನಾನು ಶಿವ ಭಕ್ತ. ಆಂಜನೇಯ ಭಕ್ತ ಎಂದೆಲ್ಲ ಹೇಳಿಕೆ ನೀಡಿದ್ದರು ಡಿಸಿಎಂ ಡಿಕೆ ಶಿವಕುಮಾರ್.‌ ಆದರೆ ಈಗ ಇದ್ದಕ್ಕಿದ್ದಂತೆ ವರಸೆಯೇ ಬದಲಾಗಿ ಹೋಗಿದೆ.

ಆಹ್ವಾನ ಪತ್ರಿಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಇರಲಿಲ್ಲ ನಿಜ. ಆದರೆ ಕಾಂಗ್ರೆಸ್ಸಿನ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ಅಧೀರ್‌ ರಂಜನ್‌ ಚೌಧರಿಯವರಿಗೆ ಆಹ್ವಾನ ಇತ್ತು. ಇದೀಗ ತಾವಷ್ಟೇ ಅಲ್ಲ, ಕಾಂಗ್ರೆಸ್ಸಿನ ಯಾವ ನಾಯಕರೂ ರಾಮ ಮಂದಿರ ಉದ್ಘಾಟನೆಗೆ ಹೋಗುವುದಿಲ್ಲ ಎಂಬ ನಿರ್ಧಾರ ತೆಗೆದುಕೊಳ್ಳುವುದರೊಂದಿಗೆ ರಾಜಕೀಯ ಮಾಡುತ್ತಿದೆ ಕಾಂಗ್ರೆಸ್.‌

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಇಷ್ಟು ದಿನ ಶ್ರೀರಾಮ ಎಲ್ಲರಿಗೂ ಆದರ್ಶ, ಶ್ರೀರಾಮನ್ನು ಬಿಜೆಪಿ ಹೈಜಾಕ್ ಮಾಡಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಠೆ ಆಹ್ವಾನ ತಿರಸ್ಕರಿಸಿದೆ. ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕಾರಣನೀಡಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಕಾಂಗ್ರೆಸ್ ಅಧಿಕೃತ ಘೋಷಣೆ ಹೊರಬೀಳುತ್ತಿದ್ದಂತೆ ಪರ ವಿರೋಧಗಳು ವ್ಯಕ್ತವಾಗಿದೆ. ಈ ಪೈಕಿ ರಾಮ ವಿರೋಧಿಗಳಿಗೆ ರಾಮನಗರಿಯಲ್ಲಿ ಜಾಗವಿಲ್ಲ. ಉದ್ಘಾಟನೆಯಿಂದ ದೂರ ಉಳಿದಿರುವ ಕಾಂಗ್ರೆಸ್‌ಗೆ ಧನ್ಯವಾದ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ಸಿಗರು ಯಾವ ರೀತಿಯ ಸಂಕಷ್ಟಕ್ಕೆ ಸಿಲುಕಿದ್ದಾರಂದ್ರೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನನಗೆ ಗೊತ್ತೇ ಇಲ್ಲ ಎಂದು ಉತ್ತರ ನೀಡದೆ ನುಣುಚಿಕೊಂಡಿದ್ಧಾರೆ ಸಿಎಂ ಸಿದ್ದರಾಮಯ್ಯ. ನ್ಯೂಸ್‌ ಚಾನೆಲ್ಲುಗಳ ಡಿಬೇಟುಗಳಿಗೆ ಕಾಂಗ್ರೆಸ್‌ ವಕ್ತಾರರನ್ನು ಕಳಿಸುತ್ತಿಲ್ಲ. ರಾಜ್ಯ ಕಾಂಗ್ರೆಸ್‌ ನಾಯಕರು ಮುಜುಗರ ಅನುಭವಿಸುವಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ಲೇವಡಿ : ಶ್ರೀರಾಮ ಕಾಲ್ಪನಿಕ, ಶ್ರೀರಾಮ ಇರುವಿಕೆಗೆ ಇತಿಹಾಸದಲ್ಲಿ ಯಾವುದೇ ದಾಖಲೆ ಇಲ್ಲ ಎಂದು 2007ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಹಲವು ಬಾರಿ ವಿರೋಧ ವ್ಯಕ್ತಪಡಿಸಿತ್ತು. ಇದೇ ಕಾಂಗ್ರೆಸ್ ರಾಮ ಮಂದಿರ ಪ್ರಾಣಪ್ರತಿಷ್ಠೆಯಿಂದ ದೂರ ಉಳಿದಿರುವುದು ಆಶ್ಚರ್ಯವಿಲ್ಲ ಎಂದು ಹಲವರು ಸಾಮಾಜಿಕ ಮಾಧ್ಯಮದಲ್ಲಿ ಕಮೆಂಟ್ ಮಾಡಿದ್ದಾರೆ.

ಜೈ ಶ್ರೀರಾಮ ಘೋಷಣೆ ಕಾಂಗ್ರೆಸ್‌ಗೆ ಅಲರ್ಜಿ, ಮೋದಿ..ಮೋದಿ ಘೋಷಣೆ ಕೇಳಿದರೆ ಕಾಂಗ್ರೆಸ್ ಉರಿದು ಬೀಳುತ್ತದೆ. ಜನವರಿ 22ರ ರಾಮ ಮಂದಿರ ಪ್ರಾಣಪ್ರತಿಷ್ಛೆಯಲ್ಲಿ ಈ ಎರಡು ಘೋಷಣೆಗಳು ಇದ್ದೇ ಇರುತ್ತೆ. ರಾಮ ಮಂದಿರದೊಳಗೆ ಹಾಗೂ ರಾಮ ಮಂದಿರ ಆವರಣದೊಳಗೆ ಜೈಶ್ರೀರಾಮ ಘೋಷಣೆ ಇದ್ದರೆ, ಆಯೋಧ್ಯೆಯಲ್ಲಿ ಜೈಶ್ರೀರಾಮ್ ಜೊತೆಗೆ ಮೋದಿ ಮೋದಿ ಘೋಷಣೆಗಳು ಇರಲಿದೆ. ಇವೆರಡನ್ನು ಕಾಂಗ್ರಸ್‌ಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಕಾಂಗ್ರೆಸ್ ಬರದೇ ಇರುವುದು ಒಳ್ಳೆಯದು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಿರ್ಧಾರ ಸರಿಯಾಗಿ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಬಿಜೆಪಿ ರಾಮ ಮಂದಿರವನ್ನು ರಾಜಕೀಯವಾಗಿ ಬಳಸಿಕೊಂಡಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಕಾಂಗ್ರೆಸ್‌ ತಾನು ಭಾಗವಹಿಸದೇ ಇರುವುದಕ್ಕೆ ರಾಮ ಮಂದಿರ ಇನ್ನೂ ಪೂರ್ಣಗೊಂಡಿಲ್ಲ ಹಾಗೂ ಇದು ಆರ್.ಎಸ್.‌ಎಸ್.‌ ಕಾರ್ಯಕ್ರಮ ಎನ್ನುವ ಸಬೂಬು ಕೊಟ್ಟಿದೆ.

ಇಂಡಿಯಾ ಒಕ್ಕೂಟದ ನಿಲುವು ಏನು?

ಈಗಾಗಲೇ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳು ರಾಮ ಮಂದಿರ ಉದ್ಘಾಟನೆಗೆ ಹೋಗುವುದೋ.. ಬಿಡುವುದೋ.. ಎಂಬ ಗೊಂದಲದಲ್ಲಿವೆ. ಎಡಪಕ್ಷಗಳಷ್ಟೇ ಹೋಗಲ್ಲ ಎಂದಿದ್ದವು. ಈಗ ಕಾಂಗ್ರೆಸ್‌ ಕೂಡಾ ಅದೇ ನಿಲುವು ತಗೊಂಡಿರೋದ್ರಿಂದ ಈ ಸಂಖ್ಯೆ ಇನ್ನಷ್ಟು ಹೆಚ್ಚಬಹುದು. ಆದರೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷಕ್ಕೆ ನೆಲೆಯೇ ಉತ್ತರ ಪ್ರದೇಶ. ಅಲ್ಲಿನ ಪಕ್ಷವೇ ಹೋಗುವುದಿಲ್ಲ ಎನ್ನುವುದಕ್ಕೆ ಆಗುವುದಿಲ್ಲ.

Tags: #ಆಹ್ವಾನಪತ್ರಿಕೆ #ಸೋನಿಯಾಗಾಂಧಿ #ಮಲ್ಲಿಕಾರ್ಜುನಖರ್ಗೆ #ರಾಮಮಂದಿರ #ಉದ್ಘಾಟನೆ #invitation #soniagandhi #mallikarjunakharge #rammandir #opening
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.