ಬಹಿರಂಗವಾಗಿ ಮಾತನಾಡಬೇಡಿ. ಮಾಧ್ಯಮಗಳಲ್ಲಿ ಮಾತನಾಡಬೇಡಿ. ನಟ ಸುದೀಪ್ (Kichcha Sudeep) ವಿರುದ್ಧ ನಿರ್ಮಾಪಕರಾದ ಎಂ.ಎನ್.ಕುಮಾರ್ (MN Kumar) ಮತ್ತು ಎನ್.ಎಂ.ಸುರೇಶ್(NM Suresh) ಅವರಿಗೆ ಮಾಧ್ಯಮಗಳಲ್ಲಿ ಸುದೀಪ್ ಹಾಗೂ ಅವರ ಕುಟುಂಬದ ಬಗ್ಗೆ ಮಾತನಾಡದಂತೆ ಸೂಚನೆ ನೀಡಿದೆ. ಸುದೀಪ್ (Kichcha Sudeep) ಅವರು 10 ಕೋಟಿ ರೂ. ಪಡೆದುಕೊಮಡಿದ್ದು, ಕಾಲ್ ಶೀಟ್ ನೀಡುತ್ತಿಲ್ಲ ಎಂದು ನಿರ್ಮಾಪಕ ಕುಮಾರ್ ಮತ್ತು ಎಂ.ಎನ್. ಸುರೇಶ್ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರ್ ವಿರುದ್ಧ ನಟ ಸುದೀಪ್ (Kichcha Sudeep) ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ 9ನೇ ಸಿಟಿ ಸಿವಿಲ್ ಕೋರ್ಟ್ ಸುದೀಪ್ ಪರ ಮಧ್ಯಂತರದ ಆದೇಶ ನೀಡಿದೆ.
ಕುಮಾರ್ ಮತ್ತು ಸುರೇಶ್ ಇಬ್ಬರೂ ಬಹಿರಂಗ ಹೇಳಿಕೆ ನೀಡಬಾರದು ಹಾಗೂ ಮಾಧ್ಯಮಗಳಿಗೂಮಾತನಾಡಬಾರದು ಎಂದು ಮಧ್ಯಂತರ ಆದೇಶದಲ್ಲಿ ಸೂಚಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಅಕ್ಟೋಬರ್ 9ಕ್ಕೆ ವಿಚಾರಣೆ ಮುಂದೂಡಿದೆ.
ಳೆದ ಬಾರಿ ನಡೆದ ವಿಚಾರಣೆಗೆ ಸ್ವತಃ ಹಾಜರಾದ ಸುದೀಪ್, ಎಂ.ಎನ್. ಕುಮಾರ್ ಮತ್ತು ಎಂ.ಎನ್. ಸುರೇಶ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ತಮಗೆ ಹಣದ ನೆರವು ನೀಡಿರುವುದಾಗಿ ಅವರು ಸುದ್ದಿಗೋಷ್ಠಿ ನಡೆಸಿ ಸುಳ್ಳು ಹೇಳಿದ್ದಾರೆ. ಇದರಿಂದ ಹಲವರು ತಮ್ಮನ್ನು ಪ್ರಶ್ನೆ ಮಾಡಿದ್ದಾರೆ. ಇದರಿಂದ 22 ವರ್ಷಗಳಿಂದ ಚಿತ್ರರಂಗದಲ್ಲಿ ಕಷ್ಟಪಟ್ಟು ಗಳಿಸಿದ್ದ ತಮ್ಮ ಹೆಸರು ಹಾಗೂ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂಬುದು ಸೇರಿದಂತೆ ಖಾಸಗಿ ದೂರಿನಲ್ಲಿ ಉಲ್ಲೇಖಿಸಿರುವ ವಿಚಾರಗಳ ಬಗ್ಗೆ ಪ್ರಮಾಣೀಕೃತ ಹೇಳಿಕೆ ದಾಖಲಿಸಿ, ಕೆಲವೊಂದು ದಾಖಲೆ ಒದಗಿಸಿದ್ದರು.



