ಗೃಹಲಕ್ಷ್ಮಿ ಹಣದ ಹಿಂದೆ ದೊಡ್ಡ ಹಗರಣ ನಡೆದಿದೆ ಎಂಬುದು ಪ್ರತಿಪಕ್ಷ ಬಿಜೆಪಿ ಆರೋಪ. ವಿಧಾನಸಭೆಯಲ್ಲಿಯೇ ತಮ್ಮಿಂದ ತಪ್ಪಾಗಿದೆ ಎಂದು ಸರ್ಕಾರ ಒಪ್ಪಿಕೊಂಡೂ ಆಗಿದೆ. ಸೋಮವಾರದಿಂದಲೇ ಪ್ರತಿ ಮನೆ ʻಗೃಹಲಕ್ಷ್ಮಿʼಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಆದರೆ ಬ್ಯಾಲೆನ್ಸ್ ಇದ್ದ ಅಥವಾ ವಂಚಿಸಿದ್ದ ಫೆಬ್ರವರಿ, ಮಾರ್ಚ್ ತಿಂಗಳ ಹಣ ಯಾವಾಗ ಬಿಡುಗಡೆ ಎಂದು ಗೊತ್ತಿಲ್ಲ. ಹಗರಣ ಆಗಿರುವುದು ಇಷ್ಟೇ. 2025ರ ಆಗಸ್ಟ್ ತಿಂಗಳವರೆಗೆ ಹಣ ಗೃಹಲಕ್ಷ್ಮಿಯರ ಖಾತೆಗೆ ಬಂದಿದೆ. ಆದರೆ ನಡುವಿನ ಫೆಬ್ರವರಿ, ಮಾರ್ಚ್ ತಿಂಗಳ ಹಣ ಮಾತ್ರ ಬಂದಿಲ್ಲ. ಆ ಹಣ 5 ಸಾವಿರ ಕೋಟಿಗೂ ಹೆಚ್ಚು. ಎಲ್ಲಿಗೆ ಹೋಯ್ತು.. ಏನಾಯ್ತು.. ಸದ್ಯಕ್ಕೆ ಯಾರಿಗೂ ಗೊತ್ತಿಲ್ಲ.
ʻʻನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆ ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದೆ. ಸೋಮವಾರದಿಂದ (ಡಿ.22) ಮುಂದಿನ ಶನಿವಾರದ ಒಳಗೆ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ. ರಾಜ್ಯದ 1.26 ಕೋಟಿ ಗೃಹಲಕ್ಷ್ಮಿಯರ ಖಾತೆಗೆ ಸೋಮವಾರದಿಂದ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.
ಈಚೆಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಸಚಿವರ ಮೇಲೆ ಗರಂ ಆಗಿದ್ದರು. ಕೂಡಲೇ ಫೆಬ್ರವರಿ, ಮಾರ್ಚ್ ಕಂತಿನ ಬಾಕಿ ಹಣ ಬಿಡುಗಡೆಗೆ ಸೂಚಿಸಿದ್ದರು. ಆದ್ರೆ 2 ತಿಂಗಳ ಹಣದ ಬಗ್ಗೆ ಸ್ಪಷ್ಟನೆ ನೀಡದ ಸಚಿವರು, 24ನೇ ಕಂತಿನ ಹಣ ಬಿಡುಗಡೆ ಸೋಮವಾರದಿಂದ ಆಗಲಿದೆ ಎಂದು ಹೇಳಿ, ಜಾರಿಕೊಂಡಿದ್ದಾರೆ.
ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಕೂಡಾ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಮಹಿಳೆಯರ ಅಕೌಂಟ್‌ಗೆ ಹಾಕಬೇಕಿದ್ದ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು?, ಆ ಹಣ ಖಜಾನೆಯಲ್ಲಿ ಇದೆಯಾ? ಖಾಲಿ ಆಗಿದೆಯಾ? ಎಂಬ ಅಂಶವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಬೇಕು. ಅವರೇ ಹಣಕಾಸು ಖಾತೆಯನ್ನ ಹೊಂದಿದ್ದಾರೆ. ಹಣ ಜಮಾ ಆಗದೆ ಇರೋದಕ್ಕೆ ಅವರು ಮತ್ತು ಅವರ ಖಾತೆಯ ಅಧಿಕಾರಿಗಳೇ ಜವಾಬ್ದಾರರು ಎಂದೂ ಆರೋಪಿಸಿದರು. ́ಕೊಡಬೇಕಿದ್ದ ಗೃಹಲಕ್ಷ್ಮಿ ಹಣ ಎಲ್ಲಿ ಹೋಗಿದೆ? ಆ ಹಣ ಖಜಾನೆಯಲ್ಲಿ ಇದೆಯಾ? ಇಲ್ಲವಾ? ಎನ್ನುವ ಅಂಶವನ್ನು ಸ್ವತಃ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಬೇಕು. ಅವರು ಮತ್ತು ಅವರ ಅವರ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಜವಾಬ್ದಾರರು ಎಂದು ಕಿಡಿ ಕಾರಿದ್ದಾರೆ.
ಹಲಕ್ಷ್ಮಿ ಯೋಜನೆಯ ಸಾವಿರ ಕೋಟಿ ಹಣದ ಬಗ್ಗೆ ಯಾರಿಗೂ ಸರಿಯಾಗಿ ಮಾಹಿತಿ ನೀಡಿಲ್ಲ. ಇದು ಸಣ್ಣ ವಿಚಾರವಲ್ಲ. ಇದು ಹೇಗಾಯಿತು ಎಂದು ಸಂಬಂಧಿತ ಸಚಿವರಿಂದ ಮಾಹಿತಿ ಪಡೆದಿದ್ದೀರಾ? ಆ ಸಚಿವರ ರಾಜೀನಾಮೆ ಕೇಳಿದ್ದೀರಾ? ಹೋಗಲಿ, ಯಾರಾದರೂ ಅಧಿಕಾರಿಯನ್ನು ಇದಕ್ಕೆ ಹೊಣೆ ಮಾಡಿ ಅಮಾನತು ಮಾಡಿದ್ದೀರಾ? ಇಷ್ಟು ದೊಡ್ಡಮೊತ್ತದ ಹಣದ ವಿಷಯದಲ್ಲಿ ಎಷ್ಟು ಹಗುರವಾಗಿ ನಡೆದುಕೊಂಡಿದ್ದೀರಿ. ಮುಖ್ಯಮಂತ್ರಿಗಳು ಪ್ರಖ್ಯಾತ ಹಣಕಾಸು ಸಚಿವರು. ನಿಮ್ಮಂತ ಹಣಕಾಸು ಸಚಿವರು ಅಮೆರಿಕದಲ್ಲೂ ಇಲ್ಲ. ಡೊನಾಲ್ಡ್ ಟ್ರಂಪ್ ಅವರಿಗೂ ಇಂಥ ಹಣಕಾಸು ಮಂತ್ರಿ ಸಿಗಲ್ಲವೇನೋ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದ್ದಾರೆ.



