ಹೊಸ ಸರ್ಕಾರ (CM Siddaramaiah) ಅಧಿಕಾರಕ್ಕೆ ಬಂದಾಗಿನಿಂದಲೂ ಕುಮಾರಸ್ವಾಮಿ (HD Kumaraswamy) , ರಾಜ್ಯ ಸರ್ಕಾರವನ್ನು ಕಾಡುತ್ತಿದ್ದಾರೆ. ಪೆನ್`ಡ್ರೈವ್, ವೈಎಸ್`ಟಿ ಟ್ಯಾಕ್ಸ್, 250 ಕೋಟಿ ಬಾಂಬ್, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಚಿತಾವಣೆ, ಟ್ರಾನ್ಸ್`ಫರ್ ದಂಧೆ, ನೈಸ್ ಯೋಜನೆ ವಿರುದ್ಧದ ಆಕ್ರೋಶ.. ಹೀಗೆ ಒಂದರ ಹಿಂದೊಂದು ಅಟ್ಯಾಕ್`ಗಳ ಮೂಲಕ ರಾಜ್ಯ ಸರ್ಕಾರವನ್ನು ಕಾಡುತ್ತಿರುವುದು ಕುಮಾರಸ್ವಾಮಿ(HD Kumaraswamy). ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧವಂತೂ ಸದನದಲ್ಲಿ ಏಕವಚನಕ್ಕೆ ತಿರುಗಿತ್ತು ಆಕ್ರೋಶ. ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ (DK Shivakumar) ವಿರುದ್ಧವೂ ಪ್ರತಿದಿನ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಡಿಕೆಶಿಯವರದ್ದು (DK Shivakumar) ಎಂದಿನಂತೆ ವ್ಯಂಗ್ಯ, ಚುಚ್ಚುಮಾತು, ಸೈಡಿಗೆ ತಳ್ಳೋ ಮಾತುಗಳ ಮೂಲಕವೇ ಉತ್ತರ ಕೊಡುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ. ಹೀಗಾಗಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು. ಅದಕ್ಕೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನೈಸ್ ಅಕ್ರಮದ ಕುರಿತು ಪ್ರಧಾನಿಗಳಿಗೆ ದೂರು ನೀಡುವುದಾಗಿ ಕುಮಾರಸ್ವಾಮಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಕುಮಾರಸ್ವಾಮಿ ಅವರ ಆರೋಪಕ್ಕೆ ಸಮಯ ಬಂದಾಗ ನಾನು ಉತ್ತರ ನೀಡುತ್ತೇನೆ. ನನಗೂ ಅವರ ಬಗ್ಗೆ ಗೊತ್ತಿದೆ. ಅವರ ವಿರುದ್ಧ, ಅವರ ತಂದೆ ವಿರುದ್ಧ ನಾನು ಸ್ಪರ್ಧಿಸಿದ್ದೇನೆ. ಅವರ ಪತ್ನಿ ವಿರುದ್ಧ ನನ್ನ ತಮ್ಮ ಸ್ಪರ್ಧಿಸಿದ್ದಾರೆ. ಕಾದು ನೋಡಿ, ಈಗ ನಾನು ಹೆಚ್ಚಾಗಿ ಚರ್ಚೆ ಮಾಡುವುದಿಲ್ಲ ಎಂದು(DK Shivakumar) ಹೇಳಿದ್ದಾರೆ.
ಅವರು ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ. ಹೀಗಾಗಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು. ಅದಕ್ಕೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡುತ್ತೇನೆ. ಕಾಯುತ್ತಿರಿ ಎಂದು ಸೂಚ್ಯವಾಗಿ (DK Shivakumar) ಹೇಳಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್.ಡಿ. ಕುಮಾರಸ್ವಾಮಿ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿಹಾಕಿಲ್ಲ ಎಂದು ಸವಾಲು ಹಾಕಿದೆ.
ಕುಮಾರಸ್ವಾಮಿ ಅವರ ಆರೋಪಕ್ಕೆ ಸಮಯ ಬಂದಾಗ ನಾನು ಉತ್ತರ ನೀಡುತ್ತೇನೆ. ನನಗೂ ಅವರ ಬಗ್ಗೆ ಗೊತ್ತಿದೆ. ಅವರ ವಿರುದ್ಧ, ಅವರ ತಂದೆ ವಿರುದ್ಧ ನಾನು ಸ್ಪರ್ಧಿಸಿದ್ದೇನೆ. ಅವರ ಪತ್ನಿ ವಿರುದ್ಧ ನನ್ನ ತಮ್ಮ ಸ್ಪರ್ಧಿಸಿದ್ದಾರೆ. ಕಾದು ನೋಡಿ, ಈಗ ನಾನು ಹೆಚ್ಚಾಗಿ ಚರ್ಚೆ ಮಾಡುವುದಿಲ್ಲಎನ್ನುವುದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತರ.



