ಜೆಡಿಎಸ್ ಪಕ್ಷದಲ್ಲಿ ನಿಖಿಲ್ ಕುಮಾರಸ್ವಾಮಿ ಭಾವಿ ರಾಜ್ಯಾಧ್ಯಕ್ಷ ಎನ್ನಲಾಗ್ತಿದೆ. ಶಾಡೋ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಟ್ಟ ಸಿಗದಿದ್ದರೂ ಪಕ್ಷವನ್ನ ಟೇಕ್ ಓವರ್ ಮಾಡಿದ್ದಾರಂತೆ. ರಾಜ್ಯಾಧ್ಯಕ್ಷ ಸ್ಥಾನ ಘೋಷಣೆಗೂ ಮುನ್ನವೇ ನಿಖಿಲ್ ಕೆಲಸ ಶುರು ಮಾಡಿದ್ದು, ಅಧಿಕೃತವಾಗಿಯೇ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ.
‘ಲೋಕಲ್’ ಕದನಕ್ಕೆ ಪಕ್ಷವನ್ನ ಸಜ್ಜುಗೊಳಿಸ್ತಿರೋ ನಿಖಿಲ್, ಸ್ಥಳೀಯ ಸಂಸ್ಥೆ ಚುನಾವಣೆಗಾಗಿ ಸರಣಿ ಸಭೆ ನಡೆಸುತ್ತಿದ್ಧಾರೆ. ಜಿಪಂ & ತಾಪಂ ಚುನಾವಣೆ ಗೆಲ್ಲಲು ನಿಖಿಲ್ ಪ್ರೀಪ್ಲಾನ್ ಮಾಡ್ತಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಹಾಲಿ, ಮಾಜಿ ಶಾಸಕರು ಸಂಸದರೊಂದಿಗೆ ಚರ್ಚೆ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಈ ಮೂರು ಜಿಲ್ಲೆಗಳ ಮೇಲೆ ನಿಖಿಲ್ ಗೆ ವಿಶೇಷ ಆಸಕ್ತಿ ಇದೆ. ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ವಶಕ್ಕೆ ತಂತ್ರ ಹೆಣೆಯುತ್ತಿದ್ದು, ಅಭ್ಯರ್ಥಿ ಆಯ್ಕೆ ಸಂಬಂಧ ಗೊಂದಲ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗೇಟ್ ಬಳಿಯ ಖಾಸಗಿ ಹೋಟಲ್‌ನಲ್ಲಿಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಯ ಹಾಲಿ, ಮಾಜಿ ಶಾಸಕರು, ಸಂಸದರು, ಪ್ರಮುಖ ಮುಖಂಡರ ಸಭೆ ಬಳಿಕ ಮಾತನಾಡಿದ ನಿಖಿಲ್ ಪಕ್ಷ ಸಂಘಟನೆಯ ದೃಷ್ಟಿಯಿಂದ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರಮಾರ್ಗದರ್ಶನ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ನಿರ್ದೇಶನದಂತೆ ಹಲವಾರು ವರ್ಷಗಳಿಂದ ಪಕ್ಷದಲ್ಲಿಶಾಸಕರಾಗಿ ಮಂತ್ರಿಗಳಾಗಿ ಕೆಲಸ ನಿರ್ವಹಿಸಿರುವವರು, ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ ಎಂದಿದ್ದಾರೆ.
ಅಂದಹಾಗೆ ನಿಖಿಲ್ ಅವರ ಸರಣಿ ಸಭೆ ಶುರುವಾಗಿರುವುದೇ ಹಾಸನದಿಂದ. ಸಭೆಗಳನ್ನು ಹಾಸನದಿಂದ ಪ್ರಾರಂಭಿಸಿದ್ದೇವೆ. ಸದಸ್ಯತ್ವ ಅಭಿಯಾನ ಪ್ರಾರಂಭಿಸಬೇಕೆಂಬ ಸೂಚನೆ ಇದೆ ಎಂದಿದ್ದಾರೆ ನಿಖಿಲ್. ಹಾಸನ ನಗರದ ಹೊರವಲಯದ ಹೊಯ್ಸಳ ರೆಸಾರ್ಟ್‌ನಲ್ಲಿ ಹಾಲಿ ಹಾಗೂ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಮುಖಂಡರ ಸಭೆ ನಡೆಸಿದ್ದಾರೆ ನಿಖಿಲ್ ಕುಮಾರಸ್ವಾಮಿ.
ಜೆಡಿಎಸ್ ಪಕ್ಷದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಕೋಲಾರ ಸಂಸದ ಮಲ್ಲೇಶ್ ಬಾಬು, ಶಿಡ್ಲಘಟ್ಟ ಶಾಸಕ ರವಿಕುಮಾರ್, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ಶ್ರೀನಿವಾಸಪುರ ಶಾಸಕ ವೆಂಕಟ ಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್, ಕೃಷ್ಣಾರೆಡ್ಡಿ, ಶ್ರೀನಿವಾಸ್ ಮೂರ್ತಿ ರಾಮೇಗೌಡ, ನರಸಿಂಹಮೂರ್ತಿ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ಇರಿಗೇನಳ್ಳಿ ಶ್ರೀನಿವಾಸ್, ಹೊಸಳ್ಳಿ ಟಿ.ರವಿಕುಮಾರ್, ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಮೂಲಗಳ ಪ್ರಕಾರ ನಿಖಿಲ್ ರಾಜ್ಯಾಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಬಗ್ಗೆ ಕುಮಾರಸ್ವಾಮಿ ಅವರಿಗೆ, ದೇವೇಗೌಡರಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಹಾಗೆ ಘೋಷಣೆ ಮಾಡುವುದಕ್ಕೂ ಮುನ್ನ ಪಕ್ಷದ ನಾಯಕರ ಜೊತೆ ಮಾತನಾಡು. ಆಗ ನಿನಗೆ ಪಕ್ಷದ ಸಂಘಟನೆಯ ಬಗ್ಗೆ ಮಾಹಿತಿ ದೊರೆಯುತ್ತದೆ. ವಿಶ್ವಾಸವೂ ಬೆಳೆಯುತ್ತದೆ ಎಂದು ಕುಮಾರಸ್ವಾಮಿಯವರೇ ಗೈಡ್ ಮಾಡಿರುವ ಹಿನ್ನೆಲೆಯಲ್ಲಿ ಈ ಸಭೆಗಳು ನಡೆಯುತ್ತಿವೆ ಎನ್ನಲಾಗಿದೆ.



