Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಹಾಸನ ಜಿಲ್ಲೆ ಸುತ್ತೋ ಕುಮಾರಸ್ವಾಮಿ ಪಂಚರತ್ನ ಯಾತ್ರೆ, ಹಾಸನ ಕ್ಷೇತ್ರಕ್ಕೆ ಮಾತ್ರ ಬರಲ್ಲ..!

SpeciallU by SpeciallU
March 7, 2023
in News, Politics
Reading Time: 1 min read
0 0
0
ಹಾಸನ ಜಿಲ್ಲೆ ಸುತ್ತೋ ಕುಮಾರಸ್ವಾಮಿ ಪಂಚರತ್ನ ಯಾತ್ರೆ, ಹಾಸನ ಕ್ಷೇತ್ರಕ್ಕೆ ಮಾತ್ರ ಬರಲ್ಲ..!

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಕಾಂಕ್ಷಿಯಾಗಿದ್ದಾರೆ. ಆದರೆ, ಇದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದು, ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವ ಚಿಂತನೆಯಲ್ಲಿದ್ದಾರೆ. ಹೀಗಾಗಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಭವಾನಿ ರೇವಣ್ಣ ಅವರು ತಾವೇ ಅಭ್ಯರ್ಥಿ ಎಂದು ಈಗಾಗಲೇ ಬಿಂಬಿಸಿಕೊಂಡಿರುವುದು ತೀವ್ರ ಚರ್ಚೆಗೂ ಗ್ರಾಸವಾಗಿದೆ. ಹಾಸನ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಗಿದರೂ ಹಾಸನ ಕ್ಷೇತ್ರದಲ್ಲಿ ಮಾತ್ರ ಸಂಚರಿಸದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ನಾಲ್ಕನೇ ಹಂತದ ಪಂಚರತ್ನ ರಥಯಾತ್ರೆಯು ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಗಲಿದೆ. ಹಾಸನ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ಸಾಗಿದರೂ, ಹಾಸನ ವಿಧಾನಸಭಾ ಕ್ಷೇತ್ರ ಪ್ರವೇಶಿಸದಂತೆ ರಥಯಾತ್ರೆ ಯೋಜಿಸಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಬುಧವಾರದಿಂದ (ಮಾ.8) ನಾಲ್ಕನೇ ಹಂತದ ಯಾತ್ರೆ ಆರಂಭವಾಗಲಿದೆ. ತುಮಕೂರು, ಹಾಸನ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಚಾಮರಾಜನಗರ, ಯಾದಗಿರಿ ಜಿಲ್ಲೆಗಳಲ್ಲಿ ಯಾತ್ರೆ ಸಾಗಲಿದೆ. ಬುಧವಾರ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಯಾತ್ರೆ ಸಂಚರಿಸಲಿದೆ. ಮಾ.9 ಮತ್ತು 10ರಂದು ಬೇಲೂರಿನಲ್ಲಿ ಸಭೆಗಳು ಜರುಗಲಿವೆ. ನಂತರ 13ರಂದು ಚನ್ನರಾಯಪಟ್ಟಣ, 14ರಂದು ಅರಸೀಕೆರೆ, 15ರಂದು ಹೊಳೆನರಸೀಪುರ, 16ರಂದು ಅರಕಲಗೂಡು, 17ರಂದು ಸಕಲೇಪುರ ಕ್ಷೇತ್ರದಲ್ಲಿ ಯಾತ್ರೆ ಪ್ರಯಾಣಿಸಲಿದೆ. ಒಂದು ವಾರ ಹಾಸನ ಜಿಲ್ಲೆಯಲ್ಲಿ ಯಾತ್ರೆ ಪ್ರಯಾಣಿಸಿದರೂ ಹಾಸನ ಕ್ಷೇತ್ರಕ್ಕೆ ಮಾತ್ರ ಹೋಗಲ್ಲ. ಹಾಸನಕ್ಕೆ ಎಂಟ್ರಿ ಕೊಡುವ ಮುನ್ನವೇ ಹಾಸನ ಟಿಕೆಟ್ ಘೋಷಿಸಲಾಗುತ್ತೆ ಎಂದು ಹೇಳಲಾಗುತ್ತಿದೆಯಾದರೂ ಖಚಿತವಾಗಿಲ್ಲ.

ಭವಾನಿ ಕಳೆದ ಬಾರಿಯ ಚುನಾವಣೆಯಲ್ಲೇ ಸ್ಪರ್ಧೆ ಮಾಡಲು ಉತ್ಸುಕರಾಗಿದ್ದರು. ಆದ್ರೆ ಪದೇ ಪದೇ ಕುಟುಂಬ ರಾಜಕಾರಣದ ಹಣೆಪಟ್ಟಿ ಬಿಳುತ್ತಿದ್ದುದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಕುಮಾರಸ್ವಾಮಿ ಆಗ ನಮ್ಮ ಕುಟುಂಬದಿಂದ ಇಬ್ಬರು ಮಾತ್ರಾ ಸ್ಪರ್ಧೆ ಮಾಡೋದಾಗಿ ಹೇಳಿಬಿಟ್ಟಿದ್ರು. ಅದೇ ಕಾರಣಕ್ಕೆ ಭವಾನಿಗೆ ಆಗ ಟಿಕೆಟ್ ತಪ್ಪಿ ಹೋಗಿತ್ತು. ಈ ಬಾರಿಯೂ ಅಷ್ಟೆ, ಭವಾನಿ ಉತ್ಸುಕರಾಗಿದ್ದಾರೆ. ತಾಯಗತಾಯ ಹಾಸನದಿಂದಲೇ ಸ್ಪರ್ಧೆ ಮಾಡಬೇಕು ಎಂಬ ಹಠದಲ್ಲಿದ್ದಾರೆ. ರೇವಣ್ಣ, ಪ್ರಜ್ವಲ್, ಸೂರಜ್ ಈಗಾಗಲೇ ವಿವಿಧ ಸ್ಥಾನಗಳಲ್ಲಿ ಇದ್ದಾರೆ. ಮತ್ತೆ ಭವಾನಿಗೂ ಟಿಕೆಟ್ ಕೊಟ್ಟರೆ ಮಾದ್ಯಮಗಳೂ, ವಿಪಕ್ಷಗಳೂ ಟೀಕಿಸದೇ ಸುಮ್ಮನೆ ಇರುತ್ತವೆಯೇ ಎಂಬ ಆತಂಕ ಒಂದು ಕಡೆಯಾದ್ರೆ. ಇಂತಹಾ ನಿರ್ಧಾರದಿಂದ ಅಕ್ಕಪಕ್ಕದ ಕನಿಷ್ಟ ಹತ್ತು ಕ್ಷೇತ್ರಗಳ ಮೇಲಾದ್ರೂ ಪರಿಣಾಮ ಆಗಬಹುದು ಎಂಬ ಭಯ ಮತ್ತೊಂದು ಕಡೆ. ಆದ್ರೆ ಏನೇ ಆದ್ರೂ ಹಾಸನ ಮೇಲಿರುವ ತಮ್ಮ ಹಿಡಿತ ಬಿಟ್ಟುಕೊಡಬಾರದು ಎಂಬುದು ರೇವಣ್ಣ ಕುಟುಂಬದ ಅಚಲ ನಿರ್ಧಾರ.

ರಾಜ್ಯದಾದ್ಯಂತ ದೊಡ್ಡ ಅಲೆ ಕ್ರಿಯೇಟ್ ಮಾಡಿದ್ದ ಕುಮಾರಸ್ವಾಮಿ ಪಂಚರತ್ನ ಯಾತ್ರೆ ಹಾಸನ ಗೊಂದಲದ ವಿಚಾರ ಶುರುವಾಗಿದ್ದೇ ದಿಢೀರನೆ ತಳಕಚ್ಚುವಂತಾಯ್ತು. ಇದೀಗ ಹಾಸನಕ್ಕೆ ಮತ್ತೊಮ್ಮೆ ಎಂಟ್ರಿ ಕೊಡುತ್ತಿರುವ ಪಂಚರತ್ನ ಯಾತ್ರೆಗೂ ಮೊದಲು ತಿಪಟೂರಿನಲ್ಲಿ ಒಕ್ಕಲಿಗರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಕುಮಾರಸ್ವಾಮಿ. ಬಳಿಕ ಬೇಲೂರಿನ ಹಗರೆಯಿಂದ ರಥಯಾತ್ರೆ ಸಂಚರಿಸಲಿದೆ. ಅಂದು ರಾತ್ರಿ ಅಲ್ಲಿಯೇ ಗ್ರಾಮ ವಾಸ್ತವ್ಯ ಹೂಡುವ ಎಚ್.ಡಿ.ಕುಮಾರಸ್ವಾಮಿ, ಬೆಳಗ್ಗೆ ರಥಯಾತ್ರೆ ಮತ್ತು ರಸ್ತೆಬದಿ ಸಭೆಗಳನ್ನು ನಡೆಸಲಿದ್ದಾರೆ. ತದನಂತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.12 ರಂದು ಆನೇಕಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಯಾತ್ರೆ ಮುಕ್ತಾಯವಾದ ಬಳಿಕ ಮಾ.18ರಂದು ಚಿಕ್ಕಮಗಳೂರು ಜಿಲ್ಲೆ ಕಡೂರು, ಮಾ.19ರಂದು ಮೈಸೂರು ಜಿಲ್ಲೆಯ ಟಿ.ನರಸೀಪುರ, ಮಾ.21ರಂದು ಬೆಂಗಳೂರಿನ ಹೆಬ್ಬಾಳ, ಮಾ.23ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ನಲ್ಲಿ ಯಾತ್ರೆಯು ಸಂಚರಿಸಲಿದೆ

Tags: #ಭವಾನಿ #ಹಾಸನ #ಟಿಕೆಟ್ #ಕುಮಾರಸ್ವಾಮಿ #ದೇವೇಗೌಡ #ಪಂಚರತ್ನಯಾತ್ರೆ #ರೇವಣ್ಣ #ಅಭ್ಯರ್ಥಿ #Bhavani #Haasan #Ticket #Kumaraswamy #Deve Gowda #Pancharatnayatra #Revanna #Candidate
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.