ನಮೋ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಜನಗಣಮನ ಬೈಕ್ ರ್ಯಾಲಿ ನಡೆಸುತ್ತಿದೆ. ಹುಬ್ಬಳ್ಳಿಯ ಉದ್ದಾನೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿದ್ದ ನಮೋಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಜನಗಣಮನ ಬೈಕ್ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಭಾರತವನ್ನು ವಿಶ್ವದಲ್ಲಿ ವಿಶ್ವಗುರುವನ್ನಾಗಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಜಿ ಅವರನ್ನು ಇನ್ನೊಮ್ಮೆ ಪ್ರಧಾನಿಯಾಗಿಸಲು ಎಲ್ಲರೂ ಸಂಕಲ್ಪ ಮಾಡೋಣ ಎಂದು ನಮೋಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕರೆ ಕೊಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸುವುದೇ ಜನಗಣಮನ ಯಾತ್ರೆಯ ಮೂಲ ಕಲ್ಪನೆಯಾಗಿದೆ ಎಂದ ಚಕ್ರವರ್ತಿ ಸೂಲಿಬೆಲೆ, ಸಮಾಜದಲ್ಲಿರುವ ಭಿನ್ನಭಿನ್ನ ಜನರನ್ನು ಮುನ್ನೆಲೆಗೆ ಕರೆದುಕೊಂಡು ಬರುವುದರೊಂದಿಗೆ ಅವರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಯಾತ್ರೆ ಕೋಲಾರದಿಂದ ಆರಂಭವಾಗಿ ಮೈಸೂರು, ಚಾಮರಾಜನಗರ ಸೇರಿದಂತೆ ಉತ್ತರ ಕರ್ನಾಟಕ ಪೂರ್ಣಗೊಳಿಸಿ ಈಗ ಹುಬ್ಬಳ್ಳಿಗೆ ಬಂದಿದೆ. ಯಾತ್ರೆಗೆ ದಾರಿಯುದ್ದಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯಾತ್ರೆಯ ವೇಳೆ ಹಕ್ಕಿ ಪಿಕ್ಕಿ ಜನಾಂಗದವರನ್ನು ಭೇಟಿ ನೀಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಗೊತ್ತಾ ಎಂದು ಕೇಳಿದರೆ ಅವರಿಂದ ಬಂದ ಉತ್ತರ ಮೋದಿ ಗೊತ್ತು, ನಮಗೆಲ್ಲ ಉಚಿತ ಗ್ಯಾಸ್ ನೀಡಿದ್ದು ಅವರೆ ಎಂದು ಹೇಳುತ್ತಾರೆ, 370 ಬಗ್ಗೆ, ನೋಟುಗಳ ಅಮಾನ್ಯೀಕರಣದ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸಮಾಜದ ಮೂಲೆ ಮೂಲೆಗಳಲ್ಲಿ ತಲುಪಿವೆ. ಅದನ್ನು ಈ ಯಾತ್ರೆಯ ಮೂಲಕ ಜಾಗೃತಗೊಳಿಸಿ ಮೂರನೇ ಬಾರಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಕೆಲಸ ಕೈಗೊಳ್ಳಲಾಗುತ್ತಿದೆ ಎಂದರು.



