Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ತಂದೆಯ ಜವಾಬ್ದಾರಿ ಹೊರಲು ಸಿದ್ಧ ಎಂದ ನಿಖಿಲ್‌ ಕುಮಾರಸ್ವಾಮಿ

SpeciallU by SpeciallU
June 29, 2024
in News, Politics
0 0
0
ತಂದೆಯ ಜವಾಬ್ದಾರಿ ಹೊರಲು ಸಿದ್ಧ ಎಂದ ನಿಖಿಲ್‌ ಕುಮಾರಸ್ವಾಮಿ

ಜೆಡಿಎಸ್‌ ಪಕ್ಷದ ಮುಂದಿನ ರಾಜ್ಯ ನಾಯಕ ಯಾರು ಎಂಬ ಪ್ರಶ್ನೆಗೆ ನಿಖಿಲ್‌ ಕುಮಾರಸ್ವಾಮಿ ತಾವೇ ಎಂಬಂತೆ ಉತ್ತರ ಕೊಟ್ಟಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್‌ ಸಂಕಷ್ಟದಲ್ಲಿದೆ. ಗೆದ್ದಿದ್ದ 19 ಶಾಸಕರ ಪೈಕಿ, ಕುಮಾರಸ್ವಾಮಿ ದೆಹಲಿಗೆ ಹೋಗಿ ಮಂತ್ರಿಯಾಗಿದ್ದಾರೆ. ಶಾಸಕರ ಬಲ 18ಕ್ಕೆ ಇಳಿದಿದೆ. ಚನ್ನಪಟ್ಟಣವನ್ನು ಮತ್ತೆ ಗೆದ್ದರೆ ಆಗ 19 ಆಗಲಿದೆ. ಜೆಡಿಎಸ್‌ ಪಕ್ಷದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಆಗಬೇಕಿದೆ. ಸದ್ಯಕ್ಕೇನೋ ಆ ಸ್ಥಾನಕ್ಕೆ ಜಿಟಿ ದೇವೇಗೌಡರ ಹೆಸರು ಕೇಳಿ ಬರುತ್ತಿದೆ. ಅದಿನ್ನೂ ಅಧಿಕೃತವಾಗಿಲ್ಲ. ಈ ನಡುವೆ ರಾಜ್ಯಾದ್ಯಂತ ಪಕ್ಷ ಸಂಘಟನೆ ಜವಾಬ್ದಾರಿ ಹೊರಲು ಸಿದ್ಧ ಎಂದು ಘೋಷಿಸಿದ್ದಾರೆ ನಿಖಿಲ್‌ ಕುಮಾರಸ್ವಾಮಿ.

ಜೆಡಿಎಸ್ ಸಂಘಟನೆ ಮಾಡುವ ಜವಾಬ್ದಾರಿ ನನ್ನ ಹೆಗಲಿಗೆ ಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರೂ ಆಗಿರುವ ನಿಖಿಲ್ ಕುಮಾರಸ್ವಾಮಿ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಜೆಡಿಎಸ್‌ ಹೇಳಿಕೇಳಿ ಪ್ರಾದೇಶಿಕ ಪಕ್ಷ. ಅದರಲ್ಲೂ ಮೈಸೂರು ಭಾಗದಲ್ಲಿ ಬಿಟ್ಟರೆ, ಕರ್ನಾಟಕದ ಇತರೆ ಕಡೆಗಳಲ್ಲಿ ಹುಡುಕುವ ಪರಿಸ್ಥಿತಿ ಇದೆ. ಒಪ್ಪುತ್ತೀರೋ.. ಬಿಡುತ್ತೀರೋ.. ದೇವೇಗೌಡರ ಕುಟುಂಬದವರನ್ನು ಬಿಟ್ಟರೆ, ಉಳಿದವರನ್ನು ಒಪ್ಪಿಕೊಳ್ಳೋ ಸ್ಥಿತಿಯಲ್ಲಿ ಕಾರ್ಯಕರ್ತರೂ ಇಲ್ಲ. ಅಲ್ಲದೆ ಭವಿಷ್ಯದ ನಾಯಕರಾಗಬಹುದು ಎಂದುಕೊಂಡಿದ್ದ ಪ್ರಜ್ವಲ್‌ ರೇವಣ್ಣ, ಸೂರಜ್‌ ರೇವಣ್ಣ ಇಬ್ಬರೂ ಈಗ ಕಂಬಿಯ ಹಿಂದಿದ್ದಾರೆ.

ಪ್ರಜ್ವಲ್‌ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪ ಹೊತ್ತಿದ್ದರೆ, ಸೂರಜ್‌ ಗಂಡಸರಿಗೆ ಕಿರುಕುಳ ಕೊಟ್ಟ ಆರೋಪ ಹೊತ್ತಿದ್ದಾರೆ. ಹೆಚ್.ಡಿ.ರೇವಣ್ಣ ಅವರೂ ಜೈಲಿಗೆ ಹೋಗಿ ಬಂದಿದ್ದಾರೆ. ಭವಾನಿ ರೇವಣ್ಣ ಜೈಲಿನ ಬಾಗಿಲಿಗೆ ಹೋಗಿ ನಿಂತು ಬಚಾವ್‌ ಆಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಿಖಿಲ್‌ ಬಿಟ್ಟರೆ ಉಳಿದವರು ಕಾಣುತ್ತಿಲ್ಲ.

ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ ಎಂದರು. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ವಿಶೇಷವಾಗಿ ಮಂಡ್ಯ, ಹಾಸನ ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ. ಈ ಸಂಬಂಧ ನಾನು ಈಗಾಗಲೇ ಪಟ್ಟಿ ಸಿದ್ಧಪಡಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ ನಿಖಿಲ್.‌

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಅಳಿವು ಉಳಿವಿನ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿದ್ದರು. ಜಿಲ್ಲೆಯ ಜನರು ಹಾಗೂ ಮದ್ದೂರು ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ಕುಮಾರಸ್ವಾಮಿ ಅವರಿಗೆ ಅತಿ ಹೆಚ್ಚು ಮತ ನೀಡಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ನಾಯಕರ ಟೀಕೆ ಟಿಪ್ಪಣಿಗಳಿಗೆ ತಕ್ಕ ಉತ್ತರ ನೀಡುವುದರೊಂದಿಗೆ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ನೀಡಿದ್ದಾರೆ. ಇದಕ್ಕೆ ದೇವೇಗೌಡರ ಇಡೀ ಕುಟುಂಬ ಚಿರಋಣಿಯಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಸಂಘಟನೆಯಲ್ಲಿ ಇನ್ನೂ ಮೊದಲ ಹೆಜ್ಜೆಯನ್ನೂ ಇಟ್ಟಿಲ್ಲ. ಸವಾಲು ದೊಡ್ಡದಿದೆ. ಹಾಗೆ ನೋಡಿದರೆ ಜೆಡಿಎಸ್‌ ಪಕ್ಷ ಸಂಘಟನೆ, ದೇವೇಗೌಡರು ಆಕ್ಟಿವ್‌ ಆಗಿದ್ದ ದಿನಗಳಲ್ಲಿ ಏರುಗತಿಯಲ್ಲಿತ್ತು. ದೇವೇಗೌಡರು ವಯೋಸಹಜ ಸಮಸ್ಯೆಗೆ ಗುರಿಯಾಗುತ್ತಿದ್ದಂತೆ, ಅವರ ಓಡಾಟವೂ ಕಡಿಮೆಯಾಯ್ತು. ದೇವೇಗೌಡರಿಗೆ ಹೋಲಿಸಿದರೆ ಕುಮಾರಸ್ವಾಮಿಯವರೂ ಕೂಡಾ ಸಂಘಟನೆ ವಿಷಯದಲ್ಲಿ ದೊಡ್ಡ ಯಶಸ್ಸು ಗಳಿಸಿಲ್ಲ. ಅದನ್ನು ಮೀರುವ ದೊಡ್ಡ ಗುರಿ ನಿಖಿಲ್‌ ಅವರ ಮೇಲಿದೆ. ಆದರೆ..

Tags: #ನಿಖಿಲ್‌ಕುಮಾರಸ್ವಾಮಿ #ಜೆಡಿಎಸ್‌ #ದೇವೇಗೌಡ #ಜವಾಬ್ದಾರಿ #NikhilKumaraswamy #JDS #DeveGowda #Responsibility
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.