ಎಸ್‌ಸಿ, ಎಸ್‌ಟಿ, ಒಬಿಸಿ ಸಮಾಜವು ವಿವಿಧ ಜಾತಿಗಳಾಗಿ ವಿಭಜನೆಯಾಗಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಕಾಂಗ್ರೆಸ್‌ಗೆ ಬುಡಕಟ್ಟು ಸಮಾಜದ ಅಸ್ಮಿತೆ ಬೇಕು, ಎಸ್‌ಟಿ ಏಕತೆಯನ್ನು ಮುರಿಯಲು ಮುಂದಾಗಿದ್ದಾರೆ. 370 ನೇ ವಿಧಿಯ ಮೂಲಕ ಕಾಂಗ್ರೆಸ್ ಕಾಶ್ಮೀರವನ್ನು ದೇಶದ ಮುಖ್ಯವಾಹಿನಿಯಿಂದ ಪ್ರತ್ಯೇಕಿಸಿತು. ಕಾಶ್ಮೀರದಲ್ಲಿ 75 ವರ್ಷಗಳ ಕಾಲ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಜಾರಿಗೆ ತರಲು ಕಾಂಗ್ರೆಸ್ ಅವಕಾಶ ನೀಡಲಿಲ್ಲ. ರಾಜೀವ್ ಗಾಂಧಿ ನಂತರ ಈಗ ಈ ಕುಟುಂಬದ ನಾಲ್ಕನೇ ತಲೆಮಾರಿನ ಪಟ್ಟದ ರಾಜಕುಮಾರ ಅದೇ ಅಪಾಯಕಾರಿ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ. ಒಬಿಸಿ ಸಮಾಜದ ಒಗ್ಗಟ್ಟನ್ನು ಯಾವುದೇ ರೀತಿಯಿಂದ ಒಡೆಯುವುದು ಕಾಂಗ್ರೆಸ್‌ನ ಏಕೈಕ ಅಜೆಂಡಾ.. ಎಂದೆಲ್ಲ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ನಾವೆಲ್ಲ ಒಗ್ಗಟ್ಟಾಗಿದ್ದರಷ್ಟೇ ನಾವೆಲ್ಲ ಅಂದರೆ ಇಡೀ ಭಾರತೀಯರು ಸುರಕ್ಷಿತ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾಶ್ಮೀರದಲ್ಲಿ ಪಾಕಿಸ್ತಾನದ ಅಜೆಂಡಾವನ್ನು ಪ್ರಚಾರ ಮಾಡಲು ಪ್ರಯತ್ನಿಸಬೇಡಿ, ನೆನಪಿಡಿ, ನಿಮ್ಮ ಈ ಯೋಜನೆಗಳು ಯಶಸ್ವಿಯಾಗುವುದಿಲ್ಲ. ಮೋದಿ ಆಶೀರ್ವಾದ ಇರುವವರೆಗೆ ಕಾಶ್ಮೀರದಲ್ಲಿ ಕಾಂಗ್ರೆಸ್ಸಿಗರೇನೂ ಮಾಡಲು ಸಾಧ್ಯವಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ರ ಸಂವಿಧಾನ ಮಾತ್ರ ದೇಶದಲ್ಲಿ ಕೆಲಸ ಮಾಡುತ್ತದೆ, ಇದು ಮೋದಿಯ ನಿರ್ಧಾರ ಎಂದು ಹೇಳಿದ್ದಾರೆ. ಹಾರಾಷ್ಟ್ರದ ಧುಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ ಸ್ವಾತಂತ್ರ್ಯದ ಸಂದರ್ಭದಲ್ಲಿ ಬಾಬಾ ಸಾಹೇಬರು ದಲಿತರು ಮತ್ತು ವಂಚಿತರಿಗೆ ಮೀಸಲಾತಿ ಬಯಸಿದ್ದರು, ಆದರೆ ನೆಹರೂ ಅವರು ದಲಿತರು, ಹಿಂದುಳಿದವರು ಮತ್ತು ವಂಚಿತರಿಗೆ ಮೀಸಲಾತಿ ನೀಡಬಾರದು ಎಂದು ಹಠ ಹಿಡಿದಿದ್ದರು. ಬಹಳ ಕಷ್ಟಪಟ್ಟು ಬಾಬಾಸಾಹೇಬರು ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ಮೀಸಲಾತಿ ಕಲ್ಪಿಸಲು ಸಾಧ್ಯವಾಯಿತು.
ನೆಹರೂ ನಂತರ ಇಂದಿರಾ ಗಾಂಧು ಬಂದರು ಮತ್ತು ಅವರು ಮೀಸಲಾತಿ ವಿರುದ್ಧ ಅದೇ ಧೋರಣೆ ಹೊಂದಿದ್ದರು. ಈ ಜನರು SC, ST, OBC ಯಾವಾಗಲೂ ದುರ್ಬಲರಾಗಿ ಉಳಿಯಬೇಕೆಂದು ಬಯಸಿದ್ದರು. ರಾಜೀವ್ ಗಾಂಧಿ ಕೂಡ ಒಬಿಸಿ ಮೀಸಲಾತಿಯನ್ನು ಬಹಿರಂಗವಾಗಿ ವಿರೋಧಿಸಿದ್ದರು ಎಂದಿದ್ದಾರೆ.
ಇದೇ ವೇಳೆ ಜಗತ್ತಿನ ಯಾವುದೇ ಶಕ್ತಿ ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇರಲಿ, ಅವರ ಮುಂದಿನ 4 ತಲೆಮಾರಿಗೂ 370ನೇ ವಿಧಿ ಮರು ಜಾರಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಬ್ಬರಿಸಿದ್ದಾರೆ. ವಿಶೇಷ ಸ್ಥಾನಮಾನದ ಕುರಿತು ಜಮ್ಮು- ಕಾಶ್ಮೀರದ ವಿಧಾನಸಭೆ ಅಧಿವೇಶನದಲ್ಲಿ ತೀವ್ರ ಸಂಘರ್ಷ ನಡೆಯುತ್ತಿರುವ ಹೊತ್ತಿನಲ್ಲೇ ಇಬ್ಬರೂ ನಾಯಕರಿಂದ ಇಂಥ ಹೇಳಿಕೆ ಹೊರಬಿದ್ದಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು ಜಮ್ಮು-ಕಾಶ್ಮೀರದಿಂದ ಸಂವಿಧಾನವನ್ನು ಹೊರಗೆ ತರಲು ಯತ್ನಿಸುತ್ತಿದೆ. ಆದರೆ, ಜಗತ್ತಿನ ಯಾವುದೇ ಶಕ್ತಿಯು ಜಮ್ಮು- ಕಾಶ್ಮೀರಕ್ಕೆ ಮತ್ತೆ 370ನೇ ವಿಧಿಯನ್ನು ತರಲು ಸಾಧ್ಯವಿಲ್ಲ. ದೇಶ ಒಗ್ಗಟ್ಟಾಗಿದ್ದರೆ ಮಾತ್ರ ಸುರಕ್ಷಿತವಾಗಿರಬಹುದು ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ ನರೇಂದ್ರ ಮೋದಿ. ಎರಡೂ ಭಾಷಣಗಳ ವೇಳೆ ಮೋದಿ ಒಗ್ಗಟ್ಟಿನ ಮಂತ್ರವನ್ನೇ ಜಪಿಸಿದ್ದಾರೆ.



