Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ತಮ್ಮ ಪ್ರಜ್ವಲ್‌ ರೇವಣ್ಣಂಗೆ ಬೆನ್ನು ನೋವು : ಅಣ್ಣ ಸೂರಜ್‌ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ..!

SpeciallU by SpeciallU
June 25, 2024
in News, Politics
Reading Time: 1 min read
0 0
0
ತಮ್ಮ ಪ್ರಜ್ವಲ್‌ ರೇವಣ್ಣಂಗೆ ಬೆನ್ನು ನೋವು : ಅಣ್ಣ ಸೂರಜ್‌ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ..!

ರೇವಣ್ಣ ಭವಾನಿ ದಂಪತಿಯ ಇಬ್ಬರೂ ಮಕ್ಕಳು ಈಗ ಜೈಲಿನಲ್ಲಿದ್ದಾರೆ. ಸೂರಜ್‌ ರೇವಣ್ಣ ಸಲಿಂಗ ಕಾಮ ಕೇಸಿನಲ್ಲಿ ಜೈಲು ಸೇರಿದ್ದರೆ, ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಕೇಸಿನಲ್ಲಿ ಜೈಲು ಸೇರಿದ್ದಾರೆ. ರೇವಣ್ಣ, ಜೈಲಿಗೆ ಹೋಗಿ ವಾಪಸ್‌ ಬಂದಿದ್ದಾರೆ. ಭವಾನಿ ಜೈಲಿನ ಅಂಚು ತಲುಪಿ ಬಚಾವ್‌ ಆಗಿದ್ದಾರೆ.

ಪ್ರಜ್ವಲ್‌ ಕೇಸ್‌ : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೈಲಿನಲ್ಲಿ ಹಲವು ದಿನಗಳಿಂದ ಬೆನ್ನು ನೋವು ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಿ ಅನಾರೋಗ್ಯ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ನೀಡಬೇಕು ಎಂದು ಪ್ರಜ್ವಲ್ ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಕೆ ಮಾಡಿದ್ದಾರೆ. ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಚಾರ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಹಾಸನ ಜಿಲ್ಲೆಯಲ್ಲಿ ದಾಖಲಾಗಿವೆ. ಈ ಕೇಸಿನಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗುತ್ತಿದ್ದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ ವೇಳೆ ವಿಚಾರಣೆ ಮಾಡಿದ ನ್ಯಾಯಾಲಯ ಅವರಿಗೆ ಪುನಃ ಜು.8ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಇದೇ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಬೆನ್ನು ನೋವು ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿದರು. ನೀವು ಜೈಲಿನ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬಹುದು. ಒಂದು ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಜೈಲು ಅಧಿಕಾರಿಗಳು ನಿಮ್ಮ ಮನವಿಯನ್ನು ನಿರಾಕರಿಸಿದರೆ ಇಲ್ಲಿ ಅರ್ಜಿ ಸಲ್ಲಿಸಿ. ಈ ಬಗ್ಗೆ ಆಮೇಲೆ ತೀರ್ಮಾನ ಮಾಡಲಾಗುತ್ತದೆ ಎಂದು ನ್ಯಾಯಾಧೀಶರು ತೀರ್ಪು ಕೊಟ್ಟಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಒಂದು ಕೇಸಿನಲ್ಲಿ ಮಾತ್ರವೇ ಜಾಮೀನು ಸಿಕ್ಕಿದೆ. 2ನೇ ಕೇಸ್‍ನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್, ಆ ಪ್ರಕರಣದಲ್ಲೂ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಧೀಶರು ಆದೇಶವನ್ನು ಜೂ.26ಕ್ಕೆ ಕಾಯ್ದಿರಿಸಿದ್ದಾರೆ. ಇನ್ನು 3ನೇ ಕೇಸಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ವಿಚಾರಣೆ ಮಾಡಲಾಗಿದ್ದು, ಜುಲೈ 8 ರವರೆಗೆ ಪುನಃ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸೂರಜ್‌ ರೇವಣ್ಣ ಕೇಸ್‌ : ಸೂರಜ್ ರೇವಣ್ಣ ವಿರುದ್ಧ ಹಾಸನದಲ್ಲಿ ಸಲಿಂಗಕಾಮದ ಕೇಸ್ ದಾಖಲಾಗುತ್ತಿದ್ದಂತೆ ಆತನನ್ನು ಬಂಧಿಸಿದ್ದ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ರಾಜ್ಯ ಸರ್ಕಾರದಿಂದ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಲಾಗಿತ್ತು. ಬೆನ್ನಲ್ಲಿಯೇ ಹಾಸನದಿಂದ ಬೆಂಗಳೂರಿಗೆ ಸೂರಜ್ ರೇವಣ್ಣನನ್ನು ಕರೆತಂದಿದ್ದ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಇಟ್ಟಿದ್ದರು. ಅದಾದ ನಂತರ ಮಂಗಳವಾರ ಸಿಐಡಿ ಪೊಲೀಸರು ಸೂರಜ್ ರೇವಣ್ಣನನ್ನು ಪರಪ್ಪನ ಅಗ್ರಹಾರದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ 42 ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದಿದ್ದಾರೆ. ನ್ಯಾಯಾಧೀಶರಾದ ಶಿವಕುಮಾರ್ ಜುಲೈ 1 ರವರೆಗೆ ಒಟ್ಟು 8 ದಿನ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದ್ದಾರೆ.

ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಲು ಮುಂದಾಗಿದ್ದಾರೆ. ಹೀಗಾಗಿ, ಇವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಲಿದ್ದಾರೆ. ಆಸ್ಪತ್ರೆಯಲ್ಲಿ ಯೂರಾಲಜಿಸ್ಟ್, ಫಾರೆನ್ಸಿಕ್ ತಜ್ಞರು ಮತ್ತು ಪಿಜಿಷಿಯನ್ ವೈದ್ಯರಿಂದ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತದೆ. ಜೊತೆಗೆ, ಮನೋ ವೈದ್ಯರಿಂದ ಕೂಡ ಸಂತ್ರಸ್ತನನ್ನ ಎಗ್ಸಾಮಿನೇಷನ್ ಮಾಡಿಸಲಿದ್ದಾರೆ.

ಸೂರಜ್ ರೇವಣ್ಣಗೆ ಯಾವ ರೀತಿ ಮೆಡಿಕಲ್ ಟೆಸ್ಟ್ ಆಗಲಿದೆ ?

1. ಕೂದಲುಗಳನ್ನ ಪರೀಕ್ಷೆಗೆ ಒಳಪಡಿಸಲು ಕೂದಲನ್ನ ಸಂಗ್ರಹ ಮಾಡಿಕೊಳ್ಳಲಿದ್ದಾರೆ.
2. ಸಂತ್ರಸ್ತ ಯುವಕನ ದೇಹದ ಮೇಲೆ ಕಚ್ಚಿದ ಗುರುತುಗಳು ಇದ್ದರೆ ಹಲ್ಲಿನ ಮಾರ್ಕ್ ಅನ್ನು ಮಾಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಸೂರಜ್ ರೇವಣ್ಣ ಹಲ್ಲಿಗೆ ಹೋಲಿಕೆ ಮಾಡಿ ಪರೀಕ್ಷಿಸಲಿದ್ದಾರೆ.
3. ಸೂರಜ್ ರೇವಣ್ಣಗೆ ಲಿಂಗತ್ವ ಪರೀಕ್ಷೆ.
4. ಅಸಹಜ ಲೈಂಗಿಕ ಕ್ರಿಯೆಗೆ ಸಮರ್ಥನ ಅಥವಾ ಈ ರೀತಿಯ ಅ ಸಹಜ ಲೈಂಗಿಕ ಕ್ರಿಯೆ ಇದೇ ಮೊದಲ ಅಂತಾ ಪರೀಕ್ಷೆ ಮಾಡ್ತಾರೆ.
5. ಕಿಡ್ನಿ ಮತ್ತು ವೃಷಣಗಳ ಪರೀಕ್ಷೆಗಳನ್ನ ಕೂಡ ನಡೆಸಲಿದ್ದಾರೆ.
6. ಲೈಂಗಿಕವಾಗಿ ಸಮರ್ಥತೆ ಬಗ್ಗೆ ಪರೀಕ್ಷೆ.
7. ಫಾರೆನ್ಸಿಕ್ ತಙ್ಞರಿಂದ ಕೂದಲು, ಬಟ್ಟೆ ಮತ್ತು ಕೆಲವೊಂದು ವಸ್ತುಗಳನ್ನ ಪರೀಕ್ಷೆಗೆ ಒಳಪಡಿಸ್ತಾರೆ.
8. ಡಿಎನ್ ಎ ಟೆಸ್ಟ್ ಕೂಡ ಮಾಡಲಿದ್ದಾರೆ.

Tags: #ಸೂರಜ್‌ರೇವಣ್ಣ #ಪ್ರಜ್ವಲ್ ರೇವಣ್ಣ #ಕೇಸ್ #ಸಿಐಡಿತನಿಖೆ #ಲೈಂಗಿಕದೌರ್ಜನ್ಯ #SurajRevanna #PrajwalRevanna #Case #CIDInvestigation #SexualAssault
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.