ಇಡೀ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಡೈರೆಕ್ಟ್ ಆಗಿ ಟೀಕೆ ಮಾಡುವ ಪ್ರಬಲ ನಾಯಕ ಎಂದು ಯಾರಾದರೂ ಇದ್ದರೆ.. ಅದು ಸಿಎಂ ಸಿದ್ದರಾಮಯ್ಯ. ಈಗಲೂ ಅಷ್ಟೆ.. ಪ್ರಧಾನಿ ಮೋದಿಯವರನ್ನು ಏಕ್ʻದಂ ಕ್ಲಾಸ್ ತೆಗೆದುಕೊಂಡಿರುವ ಸಿದ್ದರಾಮಯ್ಯ ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲ ನಾಚ್ಕೆನೂ ಆಗಲ್ಲ ಎಂದು ಟೀಕಿಸಿದ್ಧಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲ ಮೋದಿ ಭಯಾನಕ ಸುಳ್ಳು ಹೇಳಿ ಹೋಗುತ್ತಾರೆ. ಹೆಣ್ಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲಎಂದು ಟೀಕೆ ಮಾಡಿದ್ಧಾರೆ. ಮೋದಿ ಹೇಳೋ ಸುಳ್ಳುಗಳನ್ನ ಕೇಳ್ತಿದ್ರೆ ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲ ನಾಚ್ಕೆನೂ ಆಗಲ್ಲ ಎಂದಿದ್ದಾರೆ.


ಕಾಂಗ್ರೆಸ್‌ನವರು ರಾಣಿ ಚನ್ನಮ್ಮರಿಗೆ ಮತ್ತು ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದೀವಿ ಎಂದು ಸುಳ್ಳು ಹೇಳ್ತೀರಲ್ಲ, ಸುಳ್ಳಿಗೆ ಒಂದು ಮಿತಿಯಾದರೂ ಬೇಡ್ವಾ ಮೋದಿ ಎಂದು ಪ್ರಶ್ನೆ ಮಾಡಿದ್ಧಾರೆ. ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು, ಬೊಮ್ಮಾಯಿ ಮಾಡ್ಲಿಲ್ಲ, ಯಡಿಯೂರಪ್ಪ ಮಾಡ್ಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ. ಆದರೆ, ಈ ಮೋದಿ ಅದೇನು ಸುಳ್ಳು ಹೇಳ್ತಾರೆ ನೋಡಿ. ಪ್ರತಿ ಭಾರತೀಯರ ಖಾತೆಗೆ ₹15 ಲಕ್ಷ ಹಾಕ್ತೀವಿ ಎಂದು ನಂಬಿಸಿ ಪ್ರತಿ ಭಾರತೀಯರ ಹಣೆಗೆ 3 ನಾಮ ತಿಕ್ಕಿದ್ರು. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ನಂಬಿಸಿ ಕೆಲಸ ಕೇಳಿದ್ರೆ ಪಕೋಡ ಮಾರಿ ಅಂತೀರಿ. ಥೂ ನಿಮಗೆ ನಾಚಿಕೆನೇ ಆಗಲ್ವಾ ಎಂದು ಕಿಡಿ ಕಾರಿದ್ಧಾರೆ.
ನಾವು ಕಾಂಗ್ರೆಸ್ಸಿನವರು ಜನರ ಬದುಕಿನ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ ಎಂದಿರುವ ಸಿದ್ದರಾಮಯ್ಯ ರಾಜ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು, ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳು ಹಾಗೂ ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ತೋರುತ್ತಿರುವ ದ್ವೇಷ ಮತ್ತು ಮಲತಾಯಿ ಧೋರಣೆಯಿಂದಾಗಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದಿದ್ದಾರೆ.



