ನೇಹಾ ಹಿರೇಮಠ್ ಹತ್ಯೆ ಪ್ರಕರಣ ಲವ್ ಜಿಹಾದ್ ಹಾಗೂ ರಾಜಕೀಯಕ್ಕೆ ತಿರುಗಿರುವ ಹೊತ್ತಿನಲ್ಲೇ ಹುಬ್ಬಳ್ಳಿ ಮತ್ತು ಬೆಳಗಾವಿಯ ಹಲವು ಮುಸ್ಲಿಂ ಸಂಘಟನೆಗಳು ಬೀದಿಗಿಳಿದಿವೆ. ಕೊಲೆಯಾದವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಆರೋಪಿ ಮುಸ್ಲಿಂ. ರಣಭೀಕರ ಹತ್ಯೆಯ ವಿಡಿಯೋ ಕೂಡಾ ಎಲ್ಲೆಡೆ ಸಿಕ್ಕಿದೆ. ಆರೋಪಿ ಫಯಾಜ್ ಪರ ನಿಲ್ಲುವುದಕ್ಕೆ ಮುಸ್ಲಿಮರೇ ತಯಾರಿಲ್ಲ. ಹೆತ್ತ ತಂದೆಯೂ ಸಿದ್ಧರಿಲ್ಲ.
ಆರೋಪಿ ಫಯಾಜ್ʻಗೆ ಇನ್ನೂ 23 ವರ್ಷ. ನೇಹಾ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೇ ಆರೋಪಿ ಫಯಾಜ್ನನ್ನು ಗಲ್ಲೇರಿಸಬೇಕೆಂದು ಆಗ್ರಹಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಆರೋಪಿಯನ್ನು ಎನ್ಕೌಂಟರ್ ಮಾಡಿ ಅನ್ನೋ ಮಾತುಗಳೂ ಕೇಳಿ ಬರುತ್ತಿವೆ. ಇದೆಲ್ಲದರ ನಡುವೆ ಹಂತಕ ಫಯಾಜ್ ತಂದೆ ಬಾಬಾ ಸಾಹೇಬ್ ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ.
ಬಾಬಾ ಸಾಹೇಬ್ ಫಯಾಜ್ ಅವರು ಮತ್ತು ಅವರ ಪತ್ನಿ ಇಬ್ಬರೂ ಸರ್ಕಾರಿ ಶಾಲೆ ಶಿಕ್ಷಕರು. ಇಷ್ಟು ದಿನ ಫಯಾಜ್ʻನನ್ನು ಮೇಷ್ಟರ ಮಗ ಎಂದು ಕರೆಯುತ್ತಿದ್ದವರೀಗ ಈಗ ಕೊಲೆಗಾರನ ಅಪ್ಪ ಅಂತಿದ್ಧಾರೆ. ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು, ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಾರೆ. ಅವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ. ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ಧಾರೆ.
ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಬೇಡಿಕೊಂಡಿದ್ಧಾರೆ.
ಎರಡು ವರ್ಷದಿಂದ ಮಗ ನಮ್ಮ ಬಳಿ ಇರಲಿಲ್ಲ. ಹೆಚ್ಚಿನ ಶಿಕ್ಷಣಕ್ಕಾಗಿ ನಗರ ಪ್ರದೇಶಕ್ಕೆ ಹೋಗಿದ್ದ ಎಂದಿರುವ ಬಾಬಾ ಸಾಹೇಬ್ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸೋದು ತಪ್ಪಲ್ಲ. ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ಅವಳು ನನ್ನ ಮಗಳಿದ್ದ ಹಾಗೆ. ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದಿದ್ದಾರೆ.
ಇನ್ನು ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್, ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಆರೋಪಿ ಫಯಾಜ್ ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ. ಫಯಾಜ್‌ನನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಈ ಪ್ರಕರಣದಲ್ಲಿ ಫಯಾಜ್ ಮತ್ತವರ ಸಮುದಾಯದವರು ಆರೋಪಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿದ್ಧಾರೆ. ಆದರೆ.. ಸರ್ಕಾರದ ಗೃಹ ಮಂತ್ರಿಗಳೇ ಲವ್ ಕೇಸ್, ದೋಖಾ, ಮರ್ಡರ್ ಎನ್ನುತ್ತಿದ್ಧಾರೆ. ಪ್ರಕರಣ ಎಲ್ಲಿಗೆ ಮುಟ್ಟುತ್ತೋ.. ಏನೋ..



