ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚಿಸಿದೆ ಎಂದು ತಿಳಿದುಬಂದಿದೆ.
Ration Card E-KYC: ಪಡಿತರ ಚೀ ಟಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಮಾತ್ರವೇ ಅಲ್ಲ, ಬೇರೆ ಬೇರೆ ಕಡೆಗಳಲ್ಲೂ ಉಪಯೋಗಕ್ಕೆ ಬರುತ್ತದೆ. ಈ ಒಂದು ಕಾರ್ಡ್ ಮೂಲಕ ಬಿಪಿಎಲ್ ಕಾರ್ಡ್ ಇದ್ದವರು 5 ಲಕ್ಷ ರೂಪಾಯಿ ಹಾಗೂ ಎಪಿಎಲ್ ಇದ್ದವರು 2 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ಪ್ರಯೋಜನಾ ಪಡೆದುಕೊಳ್ಳಲಿದ್ದಾರೆ. ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲದೆ, ಕೆಲವು ಪ್ರಮುಖ ಗುರುತಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಈ ಕಾರ್ಡ್ ಹೊಂದಿರುವವರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಸರ್ಕಾರ ಆರೋಗ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಬಡಜನರಿಗೆ ಅನುಕೂಲವಾಗುವಂತೆ ಉತ್ತಮ ಕೆಂದ್ರ ಅರ್ಕಾರದ ಸಹಯೋಗದಲ್ಲಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇನ್ನು ಸರ್ಕಾರ ಪ್ರಧಾನಮಂತ್ರಿ ಆಯುಷ್ಮಾನ್ ಕಾರ್ಡ್ ಅನ್ನು ಜಾರಿಗೆ ತಂದಿದ್ದು, ಇದೀಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ಎನ್ನುವ ಹೆಸರಿನಲ್ಲಿ ವಿತರಣೆ ಮಾಡಲಾಗುತ್ತಿದೆ.
ಹೀಗಾಗಿ ರಾಜ್ಯ ಸರ್ಕಾರ ನವೆಂಬರ್ ಡೆಡ್ ಲೈನ್ ಕೊಟ್ಟಿದ್ದು, RATION CARD E-KYC ಮಾಡಿಸಿಕೊಳ್ಳಬೇಕು.
ಇ-ಕೆವೈಸಿ ಮಾಡಿಸುವವರು..
ಪಡಿತರ ಚೀಟಿಯ ಒರಿಜಿನಲ್ ಪ್ರತಿ
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
ಬ್ಯಾಂಕ್ ಪಾಸ್ ಬುಕ್‌ನ ಫೋಟೋಕಾಪಿ
ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ
ತೆಗೆದುಕೊಂಡು ಹೋಗಬೇಕು. ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ತಮ್ಮ ಬೆರಳಚ್ಚು ನೀಡಿ ಹೆಸರು ಮರು ನೋಂದಾಣಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸದಿರುವ ಫಲಾನುಭವಿಗಳಿಗೆ ಡಿಸೆಂಬರ್‌ನಲ್ಲಿ ಪಡಿತರವನ್ನು ನೀಡದಿರಲು ಕ್ರಮಕ್ಕೆ ಮುಂದಾಗಿದೆ.
ಅಷ್ಟೇ ಅಲ್ಲ, ಹೊಸ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಪಡೆಯಬೇಕಾದವರು ಈಗ ಅರ್ಜಿ ಸಲ್ಲಿಸಬಹುದಂತೆ. ಆದರೆ ಎಲ್ಲರಿಗೂ ಅಲ್ಲ. ಹೊಸ ಪಡಿತರ ಚೀಟಿಗಾಗಿ ನವ ದಂಪತಿಗಳು ಅರ್ಜಿ ಸಲ್ಲಿಸಬಹುದು. ತಮ್ಮ ಕುಟುಂಬದಿಂದ ಹೊರಗೆ ಉಳಿದು ಪ್ರತ್ಯೇಕವಾಗಿ ವಾಸಿಸುವವರು ಅರ್ಜಿ ಸಲ್ಲಿಕೆ ಮಾಡಹುದು. ಅಲ್ಲದೆ, ಹಿಂದಿನ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರಿದ್ದರೆ, ಅದನ್ನು ತೆಗೆಸಬೇಕಾಗುತ್ತದೆ. ಕುಟುಂಬದ ಆದಾಯದ ಆಧಾರದ ಮೇಲೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಎಂದು ನಿರ್ಧರಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳಾದ ಆಧಾರ್ ಕಾರ್ಡ್, ಖಾಯಂ ನಿವಾಸದ ಪುರಾವೆ (ಅಡ್ರೆಸ್ ಪ್ರೂಫ್), ಮೊಬೈಲ್ ಸಂಖ್ಯೆ, ಡ್ರೈವಿಂಗ್ ಲೈಸೆನ್ಸ್, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಆದಾಯ ಪ್ರಮಾಣ ಪತ್ರ (ಇನ್ ಕಂ ಸರ್ಟಿಫಿಕೇಟ್) ಹಾಗೂ ಮನೆಯ ಸದಸ್ಯರ ಬಗ್ಗೆ ಮಾಹಿತಿ ನೀಡಬೇಕು.
ಲಾಗ್ ಇನ್ ಆಗಿ, ಅದರಲ್ಲಿ ಸಿಗುವ ಸೆಲೆಕ್ಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ. ಬಳಿಕ, ಎಲ್ಲ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್‌ಲೋಡ್ ಮಾಡಿ. ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿ. ಅರ್ಜಿ ಸಲ್ಲಿಕೆ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಹೊಸ ಪಡಿತರ ಚೀಟಿ ಕಳುಹಿಸಲಾಗುತ್ತದೆ.



