Thursday, June 4, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಅಚ್ಚರಿ : ಮೋದಿ‌ ನಿರ್ಧಾರಕ್ಕೆ ಕಮಲ್‌ ಹಾಸನ್‌ ಸಪೋರ್ಟ್

SpeciallU by SpeciallU
May 23, 2026
in News, Politics
Reading Time: 1 min read
0 0
0
ಅಚ್ಚರಿ : ಮೋದಿ‌ ನಿರ್ಧಾರಕ್ಕೆ ಕಮಲ್‌ ಹಾಸನ್‌ ಸಪೋರ್ಟ್

ಇದು ಅಚ್ಚರಿ. ಆಘಾತ. ಅನಿರೀಕ್ಷಿತ. ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರಕ್ಕೆ ನಟ, ಡಿಎಂಕೆ ಪಕ್ಷದ ರಾಜ್ಯಸಭಾ ಸದಸ್ಯರಾಗಿರುವ ಕಮಲ್‌ ಹಾಸನ್‌ ಸಪೋರ್ಟ್‌ ಮಾಡಿದ್ಧಾರೆ. ಬಿಜೆಪಿ ಅಥವಾ ಮೋದಿಯವರ ಯಾವುದೇ ನಿರ್ಧಾರವನ್ನು ಹಿಂದೆ ಮುಂದೆ ಯೋಚಿಸದೆ ಟೀಕಿಸುವವರೇ ಹೆಚ್ಚಾಗಿರುವಾಗ ಇದು ಅಚ್ಚರಿಯೆನಿಸುವುದೂ ಹೌದು. ವಿಶೇಷ ಎಂದರೆ ಕಮಲ್‌ ಹಾಸನ್‌ ಅವರು ಮೋದಿಗೆ ಜೈ ಎಂದಿರುವ ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌, ನಟರಾದ ಪ್ರಕಾಶ್‌ ರೈ, ಕಿಶೋರ್‌, ಸಚಿವರಾದ ಸಂತೋಷ್‌ ಲಾಡ್‌, ಶಾಸಕರಾದ ಬಿಕೆ ಹರಿಪ್ರಸಾದ್‌ ಮೊದಲಾದವರೆಲ್ಲ ವಿರೋಧ ವ್ಯಕ್ತಪಡಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಕವಿದು, ತೈಲ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುತ್ತಿರುವ ಈ ಹೊತ್ತಿನಲ್ಲಿ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ‘ಇಂಧನ ಉಳಿತಾಯ’ ಮಂತ್ರಕ್ಕೆ ಕಮಲ್ ಹಾಸನ್ ಭರ್ಜರಿ ಬೆಂಬಲ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಹಂಚಿಕೊಂಡಿರುವ ನಾಲ್ಕು ನಿಮಿಷಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ.

Related posts

ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!

ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ

“ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರೀಯ ಜವಾಬ್ದಾರಿಯು ಪಕ್ಷ ರಾಜಕಾರಣಕ್ಕಿಂತ ಮಿಗಿಲಾಗಿರಬೇಕು” ಎನ್ನುವ ಮೂಲಕ ಅವರು ಪ್ರಬುದ್ಧತೆಯನ್ನು ಮೆರೆದಿದ್ದಾರೆ. ಇರಾನ್ ಯುದ್ಧದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರುತ್ತಿರುವುದು ಕೇವಲ ಅಂಕಿ-ಅಂಶಗಳಲ್ಲ, ಅದು ನಮ್ಮ ಅಡುಗೆಮನೆಯಿಂದ ಹಿಡಿದು ರೈತನ ಹೊಲದವರೆಗೂ ಪರಿಣಾಮ ಬೀರುತ್ತದೆʼʼ ಎಂದು ಹೇಳಿರುವ ಕಮಲ್ ಹಾಸನ್‌, ಹಿಂದೆ ಪ್ರಧಾನಿಗಳ ಜೊತೆ ದೇಶ ನಿಂತಿದ್ದನ್ನು ನೆನಪಿಸಿಕೊಂಡಿದ್ದಾರೆ.

1962ರ ಚೀನಾ ಯುದ್ಧದ ಸಮಯದಲ್ಲಿ ಗಡಿಯಲ್ಲಿರುವ ಸೈನಿಕರಿಗಾಗಿ ಭಾರತದ ಸಾಮಾನ್ಯ ಕುಟುಂಬಗಳು ತಮ್ಮಲ್ಲಿದ್ದ ಚಿನ್ನವನ್ನು ದಾನ ಮಾಡಿದ್ದವು. 1965ರಲ್ಲಿ ಆಹಾರದ ಕೊರತೆ ಎದುರಾದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಒಂದು ಕರೆಗೆ ಓಗೊಟ್ಟು ಇಡೀ ದೇಶವೇ ವಾರಕ್ಕೆ ಒಂದು ಹೊತ್ತಿನ ಊಟವನ್ನು ಬಿಟ್ಟಿತ್ತು. ನಮ್ಮ ಹಿರಿಯರು ದೇಶಕ್ಕಾಗಿ ಅಷ್ಟೊಂದು ದೊಡ್ಡ ತ್ಯಾಗ ಮಾಡಿರುವಾಗ, ನಮಗೆ ಇಂದು ಇಂಧನ ಉಳಿಸುವುದು ದೊಡ್ಡ ಕೆಲಸವೇ? ಎಂದು ಪ್ರಶ್ನಿಸಿರುವ ಕಮಲ್‌ ಹಾಸನ್‌ ವಿವಿಧ ದೇಶಗಳ ಉದಾಹರಣೆಯನ್ನೂ ಕೊಟ್ಟಿದ್ದಾರೆ.

ಭಾರತ ಮಾತ್ರವಲ್ಲದೆ ವಿಶ್ವದ 60ಕ್ಕೂ ಹೆಚ್ಚು ದೇಶಗಳು ಈಗಾಗಲೇ ಇಂಧನ ಉಳಿತಾಯದ ಕಠಿಣ ನಿಯಮಗಳನ್ನು ಜಾರಿಗೆ ತಂದಿವೆ. ನಾವು ಇಂದು ಉಳಿಸುವ ಪ್ರತಿ ಯುನಿಟ್ ಇಂಧನವೂ ನಾಳಿನ ಬಲಿಷ್ಠ ಭಾರತಕ್ಕೆ ಅಡಿಪಾಯ ಎಂದಿದ್ಧಾರೆ.

ನಟ ಕಿಶೋರ್‌, ಪ್ರಕಾಶ್‌ ರೈ ಮೊದಲಾದ ನಟರು ಲೇವಡಿ ಮಾಡುವುದನ್ನೇ ವೃತ್ತಿ ಮಾಡಿಕೊಂಡು ವಿಶ್ಲೇಷಣೆಯನ್ನೂ ಮಾಡದೆ ಉಸಿರಾಟ ಕಡಿಮೆ ಮಾಡಿ, ಊಟವನ್ನೇ ಬಿಟ್ಟು ಬಿಡಿ ಎಂಬ ಬೇಸ್‌ ಲೆಸ್‌ ಟೀಕೆ ಮಾಡುತ್ತಿರುವಾಗ ಕಮಲ್‌ ಹಾಸನ್‌ ಅವರು ಲಾಜಿಕಲ್‌ ಆಗಿ ಮಾತನಾಡಿರುವುದೇ ವಿಶೇಷ.

Tags: #ಕಮಲ್‌ ಹಾಸನ್‌ #ಸಪೋರ್ಟ್ #ಮೋದಿ‌ #Kamal Haasan #Support #Modi
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!
  • ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ
  • ಕರಡಿಗೆಯಲ್ಲಿನ ಶಿವಲಿಂಗ ʻಭಿನ್ನʼವಾಗಿದ್ದರೆ ಪೂಜೆ ಮಾಡಬೇಕಾ.. ಬೇಡವಾ..?

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!

ಪಡೆದಿದ್ದ ಲಂಚ ವಾಪಸ್‌ ಕೊಟ್ಟ ನಾಯಕರು : ಪ.ಬಂಗಾಳದಲ್ಲಿ ವಿಚಿತ್ರ ರಾಜಕೀಯ..!

June 4, 2026
ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ

ಮಂತ್ರಿಯಾದ ಯತೀಂದ್ರ.. ಆಪ್ತರಿಗೆ ಮಿಸ್‌ : ಸಿದ್ದು ಆಪ್ತರಲ್ಲಿ ಅತೃಪ್ತಿ

June 4, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.