ಮುಸ್ಲಿಮರು ರಸ್ತೆಯಲ್ಲಿ ನಮಾಜ್ ಮಾಡುವುದು ಪ್ರತಿ ಶುಕ್ರವಾರದ ಮಾಮೂಲಿ ಘಟನೆಯಂತಾಗಿ ಹೋಗಿದೆ. ಅದರಿಂದ ಅನಿರೀಕ್ಷಿತ ಟ್ರಾಫಿಕ್ ಸಮಸ್ಯೆ ಸೃಷ್ಟಿಯಾಗುತ್ತಿದ್ದರೂ.. ಪ್ರಶ್ನೆ ಮಾಡುವ ಧೈರ್ಯ ಕಾಣುತ್ತಿಲ್ಲ. ಅದಕ್ಕೆ ಕಾರಣವೂ ಇದೆ. ಮೊದಲನೆಯದ್ದು ಮುಸ್ಲಿಮರ ಒಗ್ಗಟ್ಟು. ಎರಡನೆಯದ್ದು ಕಾನೂನಿನ ಭಯ. ಇತ್ತೀಚೆಗೆ ನಡೆದ ಪ್ರಕರಣವೊಂದರಲ್ಲಿ ಕೇಸು ದಾಖಲಿಸಿದ ಪೊಲೀಸರ ವಿರುದ್ಧವೇ ವಿಚಾರಣೆ ಶುರುವಾಗಿದ್ದು, ಪ್ರಶ್ನೆ ಮಾಡಿದವರ ಮೇಲೆ ಎಫ್.ಐ.ಆರ್. ಹಾಕಲಾಗಿದೆ.
ಇತ್ತೀಚೆಗೆ ಮಂಗಳೂರಿನ ಕಂಕನಾಡಿ ಮಸೀದಿಯ ರಸ್ತೆಯಲ್ಲಿ ನಮಾಜ್ ಜರುಗಿತ್ತು. ಕೆಲವು ಮುಸ್ಲಿಂ ಯುವಕರು ಸೇರಿಕೊಂಡು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ ರಸ್ತೆಯಲ್ಲಿಯೇ ನಮಾಜ್ ಮಾಡಿದ್ದರು. ಸಾರ್ವಜನಿಕರು ಟ್ರಾಫಿಕ್ ಸಮಸ್ಯೆ ಎದುರಿಸಿದ್ದರೂ.. ಬಹಳಷ್ಟು ಜನ ವಾಹನ ತಿರುಗಿಸಿಕೊಂಡು ಬೇರೊಂದು ರಸ್ತೆಯನ್ನು ಬಳಸಿಕೊಂಡು ಹೋಗಿದ್ದರು. ಆದರೆ.. ಕೆಲವರು ಪ್ರಶ್ನೆ ಮಾಡಿದ್ದರು.
ಕಾನೂನಾತ್ಮಕವಾಗಿ ಸಾರ್ವಕನಿಕರು ಬಳಸುವ ರಸ್ತೆಯನ್ನು ಪೊಲೀಸರ ಅನುಮತಿ ಇಲ್ಲದೇ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳ ಅನುಮತಿ ಇಲ್ಲದೇ ಬಳಸಿಕೊಳ್ಳುವುದು ಹಾಗೂ ದಿಢೀರ್ ಎಂದು ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ್ದ ಆರೋಪದಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದರು. ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 341, 283, 143 ಹಾಗೂ 149ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಮುಸ್ಲಿಂ ಸಮುದಾಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಆಕ್ಷೇಪದ ಬೆನ್ನಲ್ಲೇ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಮಂಗಳೂರಿನ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ಮಾಡಿದವರ ಉದ್ದೇಶ ಸಾರ್ವಜನಿಕರ ಸಂಚಾರಕ್ಕೆ ಅಡೆತಡೆ ಮಾಡುವುದಾಗಿರಲಿಲ್ಲ ಎಂದು ಮಂಗಳೂರು ಪೊಲೀಸರು ನ್ಯಾಯಾಲಯಕ್ಕೆ ನಮಾಜ್ ವಿವಾದದ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಈ ಮೂಲಕ ರಸ್ತೆಯಲ್ಲಿ ನಮಾಜ್ ಮಾಡಿದವರೆಲ್ಲರನ್ನೂ ಆರೋಪ ಮುಕ್ತರನ್ನಾಗಿ ಮಾಡಲಾಗಿದೆ. ಅವರು ಖುಲಾಸೆಯಾಗಿದ್ದಾರೆ.
ಪ್ರಶ್ನೆ ಮಾಡಿದವರ ವಿರುದ್ಧ ಎಫ್.ಐ.ಆರ್.
ಇನ್ನು ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಸೊಮೊಟೋ ಕೇಸ್ ದಾಖಲಿಸಿದ ಕದ್ರಿ ಠಾಣೆಯ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿದೆ. ಜೊತೆಗೆ ಎ.ಸಿ.ಪಿ ದರ್ಜೆಯ ಅಧಿಕಾರಿ ಮೂಲಕ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದೆ. ಈ ಬಗ್ಗೆ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ ನಮಾಜ್ ಮಾಡಿದ್ದನ್ನು ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್ ಅವರು ಬಜರಂಗದಳದಿಂದಲೂ ಹನುಮಾನ್ ಚಾಲೀಸಾ ಪಠಣ ಮಾಡಿದರೂ ಪೊಲೀಸರು ಸುಮ್ಮನಿರುತ್ತೀರಾ ಎಂದು ಪ್ರಶ್ನೆ ಮಾಡಿದ್ದರು. ಮುಂದುವರೆದು, ಮುಂದಿನ ಶುಕ್ರವಾರವೂ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದಲ್ಲಿ ಬಜರಂಗದಳಿದಂದ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಾಗುವುದು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋನದಕಾರಿ ಸಂದೇಶ ಹಾಕಿದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.



