Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಶೇ.100ರಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಂದಾಯ ಮಾಡುತ್ತೇವೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

SpeciallU by SpeciallU
November 3, 2023
in News, Politics
Reading Time: 1 min read
0 0
0
ಶೇ.100ರಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಂದಾಯ ಮಾಡುತ್ತೇವೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಶುರುವಾಗಿದ್ದು ಆಗಸ್ಟ್‌ ತಿಂಗಳಲ್ಲಿ. ಆದರೆ ಮೊದಲ ತಿಂಗಳು ಉತ್ಸಾಹದಿಂದ ಶುರುವಾದ ಯೋಜನೆ, ಎರಡು ಮತ್ತು ಮೂರನೇ ತಿಂಗಳು ಕುಂಟುತ್ತಾ ಸಾಗುತ್ತಿದೆ. ಕಾರಣ ಏನೆಂದು ನೋಡಿದರೆ ಸಮಸ್ಯೆ ಇರುವುದು ಸಂಪನ್ಮೂಲದಲ್ಲಿ ಅಲ್ಲ. ಆರ್ಥಿಕ ಶಕ್ತಿಯೇನೋ ಇದೆ. ಸರ್ಕಾರದ ಬಳಿ ಹಣವೂ ಇದೆ. ಆದರೆ ಸಮಸ್ಯೆ ಇರುವುದು ಆ ಹಣವನ್ನು ತಲುಪಿಸುವುದರಲ್ಲಿ. ಹೀಗಾಗಿಯೇ ಗೃಹಲಕ್ಷ್ಮೀ ಯೋಜನೆ ಹಣವನ್ನು ಈ ತಿಂಗಳು ಅಂದರೆ ನವೆಂಬರ್‌ ತಿಂಗಳಲ್ಲಿಯೇ 100% ತಲುಪಿಸುವಂತೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi hebbalkar) ಹೇಳಿದ್ದಾರೆ.

Gruhalakshmi scheme money will reach will reach each and everyone who are eligible : Minister Lakshmi hebbalkar
ಲೆಕ್ಕ ಸಿಕ್ಕಿರುವ ಮೈಸೂರು ಜಿಲ್ಲೆಯನ್ನೇ ತೆಗೆದುಕೊಂಡರೆ ಮೈಸೂರಿನಲ್ಲಿ  6.5 ಲಕ್ಷ ಫಲಾನುಭವಿಗಳ ಪೈಕಿ 6.1 ಲಕ್ಷ ಮಂದಿ ಖಾತೆಗೆ 2 ಸಾವಿರ ರೂ. ಜಮೆ ಆಗಿದ್ದು, 44 ಸಾವಿರ ಮಹಿಳೆಯರಿಗೆ ಇನ್ನೂ ಹಣ ಪಾವತಿಯಾಗದೆ ನಿರಾಸೆ ಅನುಭವಿಸುತ್ತಿದ್ದಾರೆ. ಇದು ಎಲ್ಲ ಜಿಲ್ಲೆಗಳ ಸಮಸ್ಯೆಯೂ ಹೌದು.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಕೆಲವರಿಗೆ ಬಂದಿದೆ..ಕೆಲವರಿಗೆ ಬಂದಿಲ್ಲ..ಯಾರನ್ನು ಕೇಳಬೇಕೋ ಗೊತ್ತಿಲ್ಲ :

ಫಲಾನುಭವಿಗಳಲ್ಲಿ (Gruha laskhmi) ಕೆಲವರಿಗೆ ಎಲ್ಲಾದಾಖಲೆಗಳನ್ನು ಸಲ್ಲಿಸಿಯೂ ಸಿಡಿಪಿ ಲಾಗಿನ್‌ನಲ್ಲಿ ಮಂಜೂರಾಗದೇ (CDP login problem) ಬಾಕಿ ಇದ್ದರೆ, ಕೆಲವರಿಗೆ ಐಡಿ ವ್ಯಾಲಿಡೇಶನ್‌ ಮತ್ತು ಆಧಾರ್‌ ಸೀಡಿಂಗ್‌ ID Validation and adhar reading  ಸಮಸ್ಯೆ, ವ್ಯಾಲಿಡೇಶನ್‌ ಫೇಲ್‌ validation failure ಆಗಿದೆ. ಹೀಗೆ ನಾನಾ ಕಾರಣಗಳಿಂದ ಫಲಾನುಭವಿಗಳು ಅರ್ಹರಾಗಿದ್ದರೂ 2 ತಿಂಗಳಿನಿಂದ ಖಾತೆಗೆ ಹಣ ವರ್ಗಾವಣೆಯಾಗಿಲ್ಲ. ಹಲವರಿಗೆ ಎರಡು ತಿಂಗಳ ಹಣ ಖಾತೆಗೆ ಜಮೆ ಆಗಿದ್ದರೆ, ಇನ್ನೂ ಕೆಲವರಿಗೆ ಒಂದೂ ತಿಂಗಳ ಹಣವೂ ಕೈ ಸೇರಿಲ್ಲ. ಹಣ ಬಂದಿಲ್ಲಎಂಬುದನ್ನು ಯಾರ ಬಳಿ ಕೇಳಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ಸಹಾಯವಾಣಿಯನ್ನೂ ತೆರೆದಿಲ್ಲ. ಅಕಾರಿಗಳ ಸಂಪರ್ಕ ಸಂಖ್ಯೆಯನ್ನು ವೆಬ್‌ಸೈಟಿನಲ್ಲಾದರೂ ಪ್ರಕಟಿಸಿದ್ದರೆ ಅನುಕೂಲವಾಗುತ್ತಿತ್ತು. ಪಡಿತರ ಕಾರ್ಡ್‌ನೊಂದಿಗೆ ಆಧಾರ್‌ ಸಂಖ್ಯೆ ಜೋಡಣೆಯಾಗಿದ್ದರೂ ನನಗೆ ಹಣ ಬಂದಿಲ್ಲಎನ್ನುವುದು ಗೃಹಲಕ್ಷ್ಮೀ ಫಲಾನುಭವಿಗಳ ಆಕ್ರೋಶ.

ಡೋಂಟ್‌ ವರಿ, ಆತಂಕ ಬೇಡ :

ಎಲ್ಲಾ ಫಲಾನುಭವಿಗಳ ಪಟ್ಟಿ ಮತ್ತು ಹಣವನ್ನೂ ಬ್ಯಾಂಕ್‌ಗಳಿಗೆ ನೀಡಲಾಗಿದೆ. ಎಲ್ಲರಿಗೂ ಏಕಕಾಲಕ್ಕೆ ಹಣ ಕಳುಹಿಸಲು ಆಗುವುದಿಲ್ಲ. ಯಾರೂ ಆತಂಕ, ನಿರಾಸೆ ಅನುಭವಿಸುವುದು ಬೇಡ. ಹಂತಹಂತವಾಗಿ ಎಲ್ಲರ ಖಾತೆಗೆ ಹಣ ಜಮೆ ಆಗಲಿದೆ. ಈ ನಿಟ್ಟಿನಲ್ಲಿಎಲ್ಲಾಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜು ಹೇಳಿದ್ಧಾರೆ.

100% ಹಣ ಸಂದಾಯ ಮಾಡುತ್ತೇವೆ : ಲಕ್ಷ್ಮೀ ಹೆಬ್ಬಾಳ್ಕರ್‌

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು  ಸೂಚಿಸಿದ್ದಾರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌. ಆಗಸ್ಟ್‌ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್‌ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್‌ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು. ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್‌ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಪರಿಪಡಿಸಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನವೆಂಬರ್‌ ತಿಂಗಳು ಮುಗಿಯುವ ಹೊತ್ತಿಗೆ ಎಲ್ಲ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ. ಹಳೆಯ ತಿಂಗಳ ಬಾಕಿಯೂ ಸೇರಿ ಹಣವನ್ನು ಸಂದಾಯ ಮಾಡುವುದಾಗಿ ಇಲಾಖೆಯ ಅಧಿಕಾರಿಗಳು ಮೌಖಿಕವಾಗಿ ಹೇಳಿದ್ದಾರೆ.

Tags: #gruhalakshmi #lakshmihebbalkar #CMSiddaramaiah #DKShivakumar #Congress #ಸಿಎಂಸಿದ್ದರಾಮಯ್ಯ #ಡಿಕೆಶಿವಕುಮಾರ್‌ #ಕಾಂಗ್ರೆಸ್‌ #ಗೃಹಲಕ್ಷ್ಮಿಯೋಜನೆ #ಲಕ್ಷ್ಮೀಹೆಬ್ಬಾಳ್ಕರ್‌
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.