ಸಿಎಂ ಸಿದ್ದರಾಮಯ್ಯ CM Siddaramaih ಅವರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ HD Kumarswamy ಆಕ್ರೋಶ ಹೊರಹಾಕಿದ್ದಾರೆ. ಕಳೆದ ಬಾರಿ ಸಿಎಂ ಆಗಿದ್ದಾಗಲೂ ಕುಮಾರಸ್ವಾಮಿಯವರೇ ಸಿದ್ದರಾಮಯ್ಯ ಅವರನ್ನು ಕಾಡಿದ್ದರು. ಸಿದ್ದರಾಮಯ್ಯ ಅವರ ಹ್ಯುಬ್ಲೋಟ್ ವಾಚ್ ವಿಚಾರವನ್ನು ಬಹಿರಂಗಪಡಿಸಿದ್ದ ಕುಮಾರಸ್ವಾಮಿ, ಈ ಬಾರಿ ಸೋಫಾ ಸೆಟ್ ವಿಷಯವನ್ನು ಹೊರತೆಗೆದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಸಚಿವರೊಬ್ಬರು ನೀಡಿರುವ ವಿದೇಶಿ ಸೋಫಾ ಸೆಟ್ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಇದು 1 ಕೋಟಿ 90 ಲಕ್ಷ ರೂಪಾಯಿ ಬೆಲೆಬಾಳುವ ಗಿಫ್ಟ್ One crorë ninety lakhs rupees sofa set ಎಂದೂ ಹೇಳಿದ್ದಾರೆ. ಅಲ್ಲದೆ, ಇದು ಇದು ಹ್ಯೂಬ್ಲೋಟ್ ವಾಚ್‌ನ ಅಪ್ಡೇಟೆಡ್ ವರ್ಷನ್ ಎಂದು ಕಾಲೆಳೆದಿದ್ದಾರೆ.
ಸಿಎಂ ಕಚೇರಿಗೆ ಒಂದು ಕಡೆ ಖರ್ಚು ಮಾಡುತ್ತಾ ಇದ್ದಾರೆ. ಅಲ್ಲದೆ, ಕೋಟಿ ಕೋಟಿ ರೂಪಾಯಿ ಬೆಲೆಬಾಳುವ ಸೋಫಾ ಸೆಟ್ ನೀಡಿದ್ದಾರೆ ಎಂಬ ಮಾಹಿತಿ ಬಂದಿದೆ. ವಿದೇಶದಲ್ಲಿ ಸಿಗುವ ಸ್ಟಾಂಗ್ಲೆ ಅನ್ನೊ ವಿದೇಶಿ ಬ್ರಾಂಡ್ ಸೋಫಾ ಸೆಟ್ ಇದಾಗಿದ್ದು, 1 ಕೋಟಿ 90 ಲಕ್ಷ ರೂಪಾಯಿ ಬೆಲೆಬಾಳುತ್ತದೆ. ಇದನ್ನು ಯಾರೋ ಆಪ್ತ ಸಚಿವರೇ ಕೊಟ್ಟಿದ್ದಾರೆ ಎಂಬ ಮಾಹಿತಿಯೂ ಬಂದಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸಿಎಂ ಮನೆಯಲ್ಲಿ ಕಾನ್ಫರೆನ್ಸ್ ಹಾಲ್ ಅನ್ನು ನಿರ್ಮಾಣ ಮಾಡಿದ್ದಾರೆ. ಅದಕ್ಕೆ ಎಷ್ಟು ಖರ್ಚು ಮಾಡಿದ್ದಾರೋ ಗೊತ್ತಿಲ್ಲ. ಅಲ್ಲಿಗೆ ಮಾಧ್ಯಮದವರನ್ನು ಒಳಗೆ ಬಿಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಮೂರು ಕೋಟಿ ರೂಪಾಯಿಗಿಂತಲೂ ಹೆಚ್ಚೋ ಏನೋ ಎಂಬುದು ಗೊತ್ತಿಲ್ಲ. ಈ ಎಲ್ಲರದ ಬಗ್ಗೆ ಸತ್ಯ ಹರಿಶ್ಚಂದ್ರರೇ ಉತ್ತರ ಕೊಡಬೇಕು ಎಂದು ಕೆಣಕಿದ್ದಾರೆ ಕುಮಾರಸ್ವಾಮಿ.
ಈಗ ರಾಜ್ಯದ ಸಾಲ ಪ್ರಮಾಣ 5,71,600 ಕೋಟಿ ರೂಗಳಷ್ಟಿದೆ. ಹೊಸದಾಗಿ ಇವರು ಬಜೆಟ್ʼನಲ್ಲಿ 85,815 ಕೋಟಿ ರೂ ಸಾಲದ ಗುರಿ ಇಟ್ಟುಕೊಂಡಿದ್ದಾರೆ. ಪ್ರತೀ ವರ್ಷ 56,000 ಕೋಟಿ ರೂ ಬಡ್ಡಿ ಕಟ್ಟಬೇಕು ಎಂದು ಸ್ವತಃ ಸಿಎಂ ಹೇಳಿದ್ದಾರೆ. ನಿಮ್ಮ ಸರಕಾರದ ಅಧಿಕಾರಿಗಳೇ ರಾಜ್ಯದ ಆರ್ಥಿಕ ವ್ಯವಸ್ಥೆ ಅಸ್ತವ್ಯಸ್ತವಾಗಿದೆ ಎನ್ನುತ್ತಿದ್ದಾರೆ. ಇದನ್ನೇ ತೆಲಂಗಾಣಕ್ಕೆ, ಇನ್ನಿತರೆ ರಾಜ್ಯಗಳಿಗೆ ವಿಸ್ತರಿಸುತ್ತೀರಾ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಪರಿಸ್ಥಿತಿ ಇಷ್ಟು ಹದಗೆಟ್ಟಿದ್ದರೂ ಕಪ್ಪುಹಣಕ್ಕೆ ಕೊರತೆ ಇಲ್ಲ, ಕಲೆಕ್ಷನ್ನಿಗೂ ಸಮಸ್ಯೆ ಇಲ್ಲ. ಖಜಾನೆಯಲ್ಲಿ ದುಡ್ಡಿಲ್ಲ, ಅದರೆ ಆಯ್ದ ವ್ಯಕ್ತಿಗಳ ಮನೆಯಲ್ಲಿ ದುಡ್ಡಿದೆ. ಮೊನ್ನೆಯ ಐಟಿ ದಾಳಿಯಲ್ಲಿ ಯಾರಯಾರ ಮನೆಯಲ್ಲಿ ಎಷ್ಟೆಷ್ಟು ಕೋಟಿ ಹಣ ಸಿಕ್ಕಿತು ಎನ್ನುವುದನ್ನು ಜನ ನೋಡಿದ್ದಾರೆ. ಕರ್ನಾಟಕದ ದುಡ್ಡಿನಲ್ಲಿ ಕಾಂಗ್ರೆಸ್ ಪಕ್ಷ ಐದು ರಾಜ್ಯಗಳ ಚುನಾವಣೆ ನಡೆಸುತ್ತಿದೆ. ಇದು ಸತ್ಯ ಎಂದಿದ್ದಾರೆ.



