Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಬಿಜೆಪಿ ಭಿನ್ನಮತ ಕೂಲ್‌ ಮಾಡಿದ ಯಡಿಯೂರಪ್ಪ : ಈಶ್ವರಪ್ಪಗೆ ಕ್ಯಾರೇ ಅಂತಿಲ್ಲ..!

SpeciallU by SpeciallU
March 27, 2024
in News, Politics
Reading Time: 1 min read
0 0
0
ಬಿಜೆಪಿ ಭಿನ್ನಮತ ಕೂಲ್‌ ಮಾಡಿದ ಯಡಿಯೂರಪ್ಪ : ಈಶ್ವರಪ್ಪಗೆ ಕ್ಯಾರೇ ಅಂತಿಲ್ಲ..!

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಅಧ್ಯಕ್ಷರಾದರೂ.. ಯಡಿಯೂರಪ್ಪ ಅವರ ಪ್ರಭಾವ ಕಡಿಮೆಯಾಗಿಲ್ಲ. ರಾಜ್ಯ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪನವರಿಗೆ ಇಡೀ ರಾಜ್ಯದಲ್ಲಿ ಪ್ರಭಾವವಿದೆ. ನಾಯಕರ ಪರಿಯಚವೂ ಇದೆ. ಹೀಗಿರುವಾಗಲೇ.. ದೆಹಲಿ ವರಿಷ್ಠರು ಭಿನ್ನಮತ ಶಮನಕ್ಕೆ ಯಡಿಯೂರಪ್ಪ ಅವರಿಗೇ ಟಾರ್ಗೆಟ್‌ ಕೊಟ್ಟಿದ್ಧಾರೆ. ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಹುತೇಕ ಭಿನ್ನಮತ ಬಗೆಹರಿಸುವಲ್ಲ ಯಶಸ್ವಿಯೂ ಆಗಿದ್ಧಾರೆ.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಎದುರಾಗಿದ್ದ ಅಡೆತಡೆ, ಸವಾಲುಗಳನ್ನು ತಾವೇ ಮುಂದೆ ನಿಂತು ಒಂದೊಂದಾಗಿ ನಿವಾರಣೆ ಮಾಡುತ್ತಿದ್ದಾರೆ.

ಇತ್ತೀಚೆಗೆ ಟಿಕೆಟ್‌ ಘೋಷಣೆಯಾದ ಬಳಿಕ ಹಲವು ನಾಯಕರು ಅಸಮಾಧಾನದ ಧ್ವನಿ ಎತ್ತಿದ್ದರು. ಅಂತಹ ಹಲವು ನಾಯಕರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸತತವಾಗಿ ವಿವಿಧ ಕ್ಷೇತ್ರಗಳ ಮುಖಂಡರನ್ನು ಭೇಟಿ ಮಾಡಿ, ಮಾತನಾಡಿ ಆಕ್ರೋಶ ಕೂಲ್‌ ಮಾಡುವ ಪ್ರಯತ್ನ ಮಾಡಿದ್ಧಾರೆ ಯಡಿಯೂರಪ್ಪ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಸೋಮವಾರ ಟಿಕೆಟ್ ವಂಚಿತ ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ಕ್ಷೇತ್ರದ ಮುಖಂಡರೊಂದಿಗೆ ಸುದೀರ್ಘ ಸಭೆ ನಡೆಸಿ ಅಸಮಾಧಾನ ಶಮನಗೊಳಿಸಿದರಷ್ಟೇ ಅಲ್ಲ, ಕಾಂಗ್ರೆಸ್‌ನತ್ತ ಮುಖ ಮಾಡಿದ್ದ ಕರಡಿ ಸಂಗಣ್ಣ ಅವರನ್ನು ಪಕ್ಷದಲ್ಲೇ ಉಳಿಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ಧಾರೆ.

ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕ ಹಾಗೂ ಕೆಆರ್‌ಪಿಪಿ ಪಕ್ಷ ಸ್ಥಾಪಿಸಿದ್ದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಕರೆ ತಂದಿದ್ದಾರೆ. ಆ ಮೂಲಕ ಶ್ರೀರಾಮುಲು ಅವರ ಬಯಕೆಯನ್ನೂ ಈಡೇರಿಸಿದ್ದಾರೆ. ಕೊಪ್ಪಳ, ಬಳ್ಳಾರಿ, ರಾಯಚೂರುಗಳಲ್ಲಿ ಬಿಜೆಪಿಗೆ ಶಕ್ತಿ ತುಂಬಿದ್ಧಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಮ್ಯಾರಥಾನ್‌ ಸಭೆ ನಡೆಸಿದ ಯಡಿಯೂರಪ್ಪ ಮಾಜಿ ಸಚಿವರಾದ ಎಸ್‌.ಎ.ರವೀಂದ್ರನಾಥ್‌, ಎಂ.ಪಿ.ರೇಣುಕಾಚಾರ್ಯ ಮತ್ತಿತರರನ್ನು ಮಾತುಕತೆ ಮೂಲಕ ಮನವೊಲಿಸಿದ್ದಾರೆ. ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್, ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್ ಮೊದಲಾದವರ ಜೊತೆ ಕೂಡಿಕೊಂಡೇ ಸಂಧಾನ ನಡೆಸಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಉದ್ಭವಿಸಿದ್ದ ಬಿಕ್ಕಟ್ಟನ್ನು ಪರಿಹರಿಸಿದ್ದಷ್ಟೇ ಅಲ್ಲ, ಎಸ್.ಎ.ರವೀಂದ್ರನಾಥರ ನೇತೃತ್ವದಲ್ಲೇ ಚುನಾವಣೆ ಎದುರಿಸುವ ಮಾತನಾಡಿದ್ದಾರೆ.

ಇನ್ನು ಬೆಳಗಾವಿಯಲ್ಲೂ ಅಷ್ಟೆ, ಬೀದರ್‌ʻನಲ್ಲೂ ಅಷ್ಟೆ, ರಾಯುಚೂರಿನಲ್ಲೂ ಅಷ್ಟೆ… ಭಿನ್ನಮತೀಯರನ್ನು ಸಮಾಧಾನಗೊಳಿಸುವಲ್ಲಿ ಯಶಸ್ವಿಯಾಗಿರುವ ಯಡಿಯೂರಪ್ಪ ಒಂದು ಹಂತಕ್ಕೆ ಸಕ್ಸಸ್‌ ಕಂಡಿದ್ಧಾರೆ.  ಪಕ್ಷದ ಮುಖಂಡರಲ್ಲಿ ತಲೆದೋರಿರುವ ಅಸಮಾಧಾನವನ್ನು ಹೋಗಲಾಡಿಸುವ ಪ್ರಯತ್ನದಲ್ಲಿ ಯಡಿಯೂರಪ್ಪ ಯಶಸ್ಸು ಕಂಡಿದ್ದು, ತಾವೇಕೆ ಲೀಡರ್‌  ಆಗಿದ್ಧೇನೆ ಅನ್ನೋದನ್ನ ಸಾಬೀತು ಮಾಡಿದ್ದಾರೆ.

ಈಶ್ವರಪ್ಪ ಜೊತೆ ಸಂಧಾನ ಇಲ್ಲ : ಎಲ್ಲರನ್ನೂ ಸಮಾಧಾನ ಪಡಿಸಿದ್ದರೂ ಈಶ್ವರಪ್ಪ ಜೊತೆ ಸಂಧಾನ ಮಾಡುವ ಪ್ರಯತ್ನ ಮಾಡಿಲ್ಲ. ತಮ್ಮ ಪುತ್ರನೇ ಅಭ್ಯರ್ಥಿಯಾಗಿದ್ದರೂ.. ಸಂಧಾನಕ್ಕೆ ಮುಂದಾಗಿಲ್ಲ. ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ನಾಯಕರ ಸಲಹೆ ಮೇರೆಗೆ ಈಶ್ವರಪ್ಪ ಅವರನ್ನು ಸಮಾಧಾನಪಡಿಸುವ ಪ್ರಯತ್ನವನ್ನು ನಿಲ್ಲಿಸಲಾಗಿದೆ. ಅಷ್ಟೇ ಅಲ್ಲ, ಟೀಕೆ ಮಾಡುವ ಹಂತದಲ್ಲಿ ಈಶ್ವರಪ್ಪ ಲಂಗು ಲಗಾಮಿಲ್ಲದೆ ಮಾತನಾಡಿದ್ದು, ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಘಾಸಿ ಮಾಡುವ ರೀತಿಯಲ್ಲಿ ಮಾತನಾಡಿದ್ದು ಯಡಿಯೂರಪ್ಪ ಅವರನ್ನು ವೈಯಕ್ತಿಕವಾಗಿ ಕೆರಳಿಸಿದೆ ಎನ್ನಲಾಗಿದೆ.

Tags: #ಈಶ್ವರಪ್ಪ #ಬಿಜೆಪಿ #ಯಡಿಯೂರಪ್ಪ #ವಿಜಯೇಂದ್ರ #ಭಿನ್ನಮತ #Eeshwarappa #BJP #Yadiyoorappa #Vijayendra #dissent #modi #Loksabhaelection #shivamogga
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.