Saturday, March 7, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

ಮುಡಾಗೆ 14 ಸೈಟು ವಾಪಸ್‌ : ಪತಿ ಸಿದ್ದರಾಮಯ್ಯಗೂ ಗೊತ್ತಿಲ್ಲದೆ ನಿರ್ಧಾರ ಕೈಗೊಂಡ ಪಾರ್ವತಿ ಸಿದ್ದರಾಮಯ್ಯ..!

SpeciallU by SpeciallU
October 1, 2024
in News, Politics
Reading Time: 1 min read
0 0
0
ಮುಡಾಗೆ 14 ಸೈಟು ವಾಪಸ್‌ : ಪತಿ ಸಿದ್ದರಾಮಯ್ಯಗೂ ಗೊತ್ತಿಲ್ಲದೆ ನಿರ್ಧಾರ ಕೈಗೊಂಡ ಪಾರ್ವತಿ ಸಿದ್ದರಾಮಯ್ಯ..!

ಮುಡಾ ಹಗರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆಯುತ್ತಿದೆ. ಸಿಎಂ ಆಗಿರುವ ಸಿದ್ದರಾಮಯ್ಯ ನಿಜಕ್ಕೂ ತಪ್ಪು ಮಾಡಿದ್ದಾರೆಯೇ.. ಇಲ್ಲವೇ.. ಎನ್ನುವುದು ತನಿಖೆಯಲ್ಲಿ ಸಾಬೀತಾಗಬೇಕಿರುವ ಅಂಶ. ಆದರೆ ಈ ಹಗರಣದಲ್ಲಿ ಇಷ್ಟು ದಿನ ನೇಪಥ್ಯದಲ್ಲೇ ಇದ್ದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರು ರಾಜಕೀಯದಲ್ಲಿ ಚರ್ಚೆಯಾಗಿದ್ದು ವಿಶೇಷ. ಇದೀಗ ಅದೇ ಪಾರ್ವತಿಯವರು ತಮಗೆ ಬಂದಿದ್ದ ಎಲ್ಲ ೧೪ ಮುಡಾ ನಿವೇಶನಗಳನ್ನೂ ವಾಪಸ್‌ ತೆಗೆದುಕೊಳ್ಳುವಂತೆ ಮುಡಾಗೆ ಮನವಿ ಮಾಡಿದ್ದಾರೆ. ಇದನ್ನು ತಮ್ಮ ಪತಿ ಸಿದ್ಧರಾಮಯ್ಯ ಅವರಿಗೂ ಗೊತ್ತಿಲ್ಲದಂತೆ ಮಾಡಿದ್ದಾರೆ ಎನ್ನುವುದೇ ವಿಶೇಷ.

…ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜಜಕೀಯವಾಗಿ ಆಗುತ್ತಿರುವ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಗಮನಿಸಬೇಕಾದ ಅಂಶ ಅಂದ್ರೆ, ಸಾರ್ವತಿ ಅವರು ಬರೆದ ಪತ್ರದಲ್ಲಿ ದಿನಾಂಕ ಇಲ್ಲ. ಅಷ್ಟೇ ಅಲ್ಲ, ಪತ್ರದ ಪ್ರಕಾರ ಸಿದ್ದರಾಮಯ್ಯ ಅವರಿಗೆ ತಮ್ಮ ಪತ್ನಿ ಮುಡಾ ಸೈಟುಗಳನ್ನು ವಾಪಸ್‌ ಮಾಡುತ್ತಿರುವುದು ಗೊತ್ತಿಲ್ಲ. ಸಿದ್ದರಾಮಯ್ಯ ಅವರ ಟ್ವೀಟ್‌ ನೋಡಿದರೆ, ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ಮಾಹಿತಿ ಇಲ್ಲ ಎಂದು ಅರ್ಥವಾಗುತ್ತದೆ.

Related posts

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ಪಾರ್ವತಿ ಸಿದ್ದರಾಮಯ್ಯ ಪತ್ರದಲ್ಲಿ ಏನಿದೆ..?
ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿತ್ತು ಎಂದು ಪ್ರಸ್ತಾಪಿಸಿರುವ ಪಾರ್ವತಿ ಸಿದ್ದರಾಮಯ್ಯ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತಿರುವುದಾಗಿ ಪತ್ರದಲ್ಲಿ ಹೇಳಿದ್ದಾರೆ.

ಪತಿ ಸಿದ್ದರಾಮಯ್ಯಗೂ ಗೊತ್ತಿಲ್ಲದೆ ನಿರ್ಧಾರ..!

ಪತ್ರದಲ್ಲಿ ಪತಿ ಸಿದ್ದರಾಮಯ್ಯ ಅವರ ಹೆಸರನ್ನೂ ಉಲ್ಲೇಖಿಸಿದ್ದಾರೆ. ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ಎಂದು ಬರೆಯುತ್ತಾರೆ ಪಾರ್ವತಿ ಸಿದ್ದರಾಮಯ್ಯ.

ಇಲ್ಲಿ ಅತ್ಯಂತ ಸ್ಪಷ್ಟವಾಗಿ ನನ್ನ ಪತಿಯವರ ನಿರ್ಧಾರ ಏನು ಅನ್ನೋದು ನನಗೆ ಗೊತ್ತಿಲ್ಲ ಎನ್ನುತ್ತಾರೆ. ತಾವೇ ಪ್ರಜ್ಞಾಪೂರ್ವಕವಾಗಿ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದೂ ಹೇಳುತ್ತಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ ಕೂಡಾ ನನ್ನ ಪತ್ನಿಯ ನಿರ್ಧಾರ ನನಗೂ ಅಚ್ಚರಿ ತಂದಿದೆ. ಆದರೆ ಅವರ ನಿರ್ಧಾರವನ್ನು ಗೌರವಿಸುತ್ತೇನೆ ಎನ್ನುತ್ತಾರೆ. ನನಗೂ ಅಚ್ಚರಿ ತಂದಿದೆ ಎನ್ನುವ ಮೂಲಕವೇ ತಮಗೆ ಈ ಮೊದಲು ಮಾಹಿತಿ ಇಲ್ಲ ಎಂದು ಹೇಳುತ್ತಾರೆ ಸಿದ್ದರಾಮಯ್ಯ.

ಒಟ್ಟಿನಲ್ಲಿ ಮುಡಾ ಸೈಟು ಹಗರಣ ಹಲವು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಇಲ್ಲಿಗೇ ಇದು ಮುಗಿಯುತ್ತದಾ..? ಗೊತ್ತಿಲ್ಲ.

 

Tags: #News #Mysuru #muda #Siddaramaiah #wife #Parvathi #14sites #mysore #urban #muda #ಮುಡಾ #ಸೈಟುಹಗರಣ #ಮೈಸೂರು #ಸಿದ್ದರಾಮಯ್ಯ #ಪಾರ್ವತಿ #ಪತ್ನಿ #ಸಿಎಂಸಿದ್ದರಾಮಯ್ಯ #ಲೋಕಾಯುಕ್ತ
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ
  • ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?
  • 2 ತಿಂಗಳ ನಂತರವೇ  OTTಗೆ : ಟಾಲಿವುಡ್‌ ನಿರ್ಧಾರ

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

ಪ್ರೀತಿ ಹುಟ್ಟಿದ ಕಥೆ ಹೇಳಿಕೊಂಡ ರಶ್ಮಿಕಾ ದೇವರಕೊಂಡ

February 27, 2026
ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

ದರ್ಶನ್‌ ರಿಲೀಸ್‌ : ಕೋಡಿಮಠ ಶ್ರೀಗಳು ಹೇಳಿದ್ದೇನು..?

February 27, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.