ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೆ ಸ್ಯಾಂಡಲ್ವುಡ್ ಸ್ಟಾರ್ ವೆಡ್ಡಿಂಗ್ಗೆ ಸಾಕ್ಷಿಯಾಗಲಿದೆ. ನಟ ಅಭಿಷೇಕ್ ಮತ್ತು ಅವಿವಾ ವಿವಾಹ ಇದೇ ಜೂನ್ 9 ಮತ್ತು 10ರಂದು ನಡೆಯಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ನಡೆದರೆ, ಜೂನ್ 12ರಂದು ಮಂಡ್ಯದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಸುಮಾರು 10 ಸಾವಿರ ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ.
ಮದುವೆಗೆ ಆಭರಣ, ವಸ್ತ್ರಗಳ ಖರೀದಿ ಜೋರಾಗಿ ನಡೆದಿದ್ದು, ಸ್ವತಃ ವಸ್ತ್ರ ವಿನ್ಯಾಸಕಿ ಆಗಿರುವ ಅವಿವಾ ಬಿದ್ದಪ್ಪ ಅವರೇ ತಮ್ಮ ಹಾಗೂ ಅಭಿಷೇಕ್ ತೊಡಲಿರುವ ಉಡುಗೆಯನ್ನು ಡಿಸೈನ್ ಮಾಡುತ್ತಿರುವುದು ವಿಶೇಷ. ಅಭಿಷೇಕ್-ಅವಿವಾ ಭೇಟಿ, 3-4 ವರ್ಷಗಳ ಡೇಟಿಂಗ್ ನಂತರ ಇತ್ತೀಚಿಗೆ ಈ ಜೋಡಿ ಎಂಗೇಜ್ಮೆಂಟ್ ಮಾಡಿಕೊಂಡಿತ್ತು. ಖ್ಯಾತ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಮಗಳು ಅವಿವಾ ಜೊತೆ ಇದೀಗ ಹಸೆಮಣೆ ಏರಲು ಅಂಬಿ ಪುತ್ರ ಸಜ್ಜಾಗಿದ್ದಾರೆ.
ಅಭಿಷೇಕ್ ಮದುವೆಗೆ ಕೇಂದ್ರದ ಪ್ರಮುಖ ರಾಜಕಾರಣಿಗಳ ಜೊತೆಗೆ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಇನ್ನೂ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ನಿಂದ ಶತ್ರುಘ್ನ ಸಿನ್ಹಾ ಇನ್ನೂ ಹಲವು ಪ್ರಮುಖ ತಾರೆಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.



