ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಐದು ದಿನಗಳಿಂದ ಮೊಣಕಾಲು ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಫೆಬ್ರುವರಿ 28ರಂದು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಇದರಿಂದ ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ದೇವೇಗೌಡ್ರು, , ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮಾಮೂಲಿ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಗಾಬರಿಗೊಳ್ಳುವ ಅಗತ್ಯವಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಮನೆಗೆ ಮರಳಲಿದ್ದೇನೆ ಎಂದಿದ್ದರು. ಇದೀಗ ವಾಪಸ್ ಮನೆಗೆ ಮರಳಿದ್ದು, ಹಾಸನ ಟಿಕೆಟ್ ಗೊಂದಲವನ್ನು ನಿವಾರಿಸಲಿದ್ದಾರೆ.


ಜೆಡಿಎಸ್ ತನ್ನ ಪಂಚರತ್ನ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೂ ಮುನ್ನ ಮಾರ್ಚ್ 26 ರಂದು ಬೆಂಗಳೂರಿನ ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿಲೋಮೀಟರ್ ತೆರೆದ ವ್ಯಾನ್ನಲ್ಲಿ ಪಕ್ಷದ ವರಿಷ್ಠ ಎಚ್ಡಿ ದೇವೇಗೌಡರನ್ನು ಕರೆದುಕೊಂಡು ಹೋಗಲಿದೆ. ಬೆಂಗಳೂರಿನಿಂದ ಮೈಸೂರಿನವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲು ದೇವೇಗೌಡರು ತೀರ್ಮಾನಿಸಿದ್ದಾರೆ. ಇದೆ ಮಾರ್ಚ್ 26ರಂದು ರೋಡ್ ಶೋಗೆ ದೊಡ್ಡಗೌಡ್ರು ನಿರ್ಧಾರ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರನ್ನು ಸೇರಿಸಿ ರೋಡ್ ಶೋ ಮೂಲಕ ದೇವೇಗೌಡ ಮೈಸೂರು ತಲುಪಲಿದ್ದಾರೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಸುಪ್ರೀಂ ಎನ್ನುವ ಸಂದೇಶ ನೀಡಲಿದ್ದಾರೆ.



