ಚುನಾವಣೆಗೆ ಮುನ್ನ ಘೋಷಿಸಿದ್ದ ಎಲ್ಲ ಐದೂ ಗ್ಯಾರಂಟಿಗಳನ್ನೂ ಈ ಆರ್ಥಿಕ ವರ್ಷದಲ್ಲಿಯೇ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ಧಾರೆ.
ಗೃಹ ಜ್ಯೋತಿ :
ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ.
ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇ.10 ರಷ್ಟರವರೆಗಿನ ವಿದ್ಯುತ್ ಉಚಿತ. ಜು.1 ರಿಂದ ಆಗಸ್ಟ್ ಗರೆಗಿನ ಖರ್ಚಿಗೆ ಇದು ಲೆಕ್ಕ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಇದೆ. ಆದರೆ ಹಳೆಯ ಬಾಕಿಯನ್ನು ಗ್ರಾಹಕರೇ ಕಟ್ಟಬೇಕು. ಸರ್ಕಾರ ಕಟ್ಟಲ್ಲ. ಬಾಡಿಗೆ ದಾರರಿಗೂ ಅನ್ವಯ ಆಗಲಿದೆ. ಮನೆಯಲ್ಲಿ ವಾಸ ಆಗಿರುವ, ಆಧಾರ ಕಾರ್ಡ್ ಹೊಂದಿರುವ ವ್ಯಕ್ತಿ ಬಿಲ್ ಕಟ್ಟಂಗಿಲ್ಲ.
ಗೃಹಲಕ್ಷ್ಮಿ :
ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೆ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಜರಾಕ್ಸ್ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಸೇರಿದಂತೆ ಎಲ್ಲರಿಗೂ ಈ ಯೋಜನೆ ಅನ್ವಯವಾಗುತ್ತದೆ.
ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕು. ಸಾಫ್ಟ್ವೇರ್ ಅಭಿವೃದ್ಧಿಪಡಿಸಬೇಕು. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮೆ. ಜೂ.15 ರಿಂದ ಜು.15 ರೊಳಗೆ ಆನ್ ಲೈನ್ ಅಲ್ಲಿ ಅರ್ಜಿ ಹಾಕಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಹಾಕಬಹುದು. 18 ವರ್ಷ ತುಂಬಿದವರು. ಜು.15 ರಿಂದ ಆ.15 ರವರೆಗೆ ಪ್ರಕ್ರಿಯೆ ನಡೆಸಿ, ಆ.15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ.
ಅನ್ನಭಾಗ್ಯ :
ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆಯಾಗಲಿದೆ. ಹೀಗಾಗಿ ಜು.1 ರಿಂದ ಬಿಪಿಎಲ್ + ಅಂತ್ಯೋದಯ ಅನ್ನ ಕಾರ್ಡುದಾರರಿಗೆ ತಲಾ 10 ಕೆ.ಜಿ. ಅಕ್ಕಿ. ಫ್ರೀ. ಯಾವ ಯೋಜನೆಗಳಿಗೂ ಜಾತಿ, ಧರ್ಮ, ಭಾಷೆ ಭೇದವಿಲ್ಲ.
ಉಚಿತ ಪ್ರಯಣ :
ಈ ಯೋಜನೆ ಪ್ರಕಾರ ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂ.11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, (ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು) ಉಚಿತ ಪ್ರಯಾಣ. ಕೆಎಸ್ಆರ್ಟಿಸಿಯಲ್ಲಿ ಶೇ.50 ರಷ್ಟು ಆಸನ ಮೀಸಲು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಕುಳಿತು ಹೋಗಬಹುದು.
ಯುವನಿಧಿ :
2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿಶಿಕ್ಷಣವೂ ಸೇರಿ ಎಲ್ಲ ಪದವೀಧರರು ನೋಂದಣಿ ಮಾಡಿಕೊಂಡ ದಿನದಿಂದ 24 ತಿಂಗಳ(2 ವರ್ಷ)ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. ಯುವಕ, ಯುವತಿ + ತೃತೀಯಲಿಂಗಿಗಳಿಗೂ ಅನ್ವಯ. ಇದಕ್ಕೆ ಅರ್ಜಿ ಹಾಕಬೇಕು.



