ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರಾ..? ಹೌದು ಎನ್ನುತ್ತಿವೆ ಬಿಜೆಪಿ ಮೂಲಗಳು. ನಟ ಸುದೀಪ್ ಬಿಜೆಪಿ ಸೇರುವ ಬಗ್ಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಸುದ್ದಿಗೋಷ್ಠಿ ನಡೆಸಲಿದೆ.
ಮಧ್ಯಾಹ್ನ 1.30 ಕ್ಕೆ ಸುದ್ದಿಗೋಷ್ಠಿ ನಡೆಯಲಿದ್ದು ಅಧಿಕೃತವಾಗಿ ಸುದೀಪ್ ಪಕ್ಷಕ್ಕೆ ಸೇರಲಿದ್ದಾರೆ. ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಆಗಲಿರುವ ಸುದೀಪ್, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾರೆ. ಕಿಚ್ಚ ಸುದೀಪ್ ಅವರ ಆಪ್ತಮೂಲಗಳೂ ಕೂಡಾ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂದು ಹೇಳುತ್ತಿವೆ.
ಸುದೀಪ್ ಅವರನ್ನ ಬಿಜೆಪಿಗೆ ಕರೆ ತರಲು ಎರಡು ತಿಂಗಳಿಂದ ಪ್ರಯತ್ನ ನಡೆಯುತ್ತಿತ್ತು. ಸಿಎಂ ನೇತೃತ್ವದಲ್ಲೇ ಮಾತುಕತೆ ಆಗಿದೆ. ನಾಳೆ ಮಧ್ಯಾಹ್ನ 1-30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಬರು ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. ಚುನಾವಣಾ ಪ್ರಚಾರ ಕುರಿತಾದ ಧ್ವನಿ ಸುರುಳಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಧ್ವನಿ ಸುರಳಿ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಸುದೀಪ್ಗೆ ಆಹ್ವಾನನಾ?, ಅಥವಾ ಸುದೀಪ್ ಅವರು ಬಿಜೆಪಿ ಸೇರುವ ಬಗ್ಗೆ ಪತ್ರಿಕಾಗೋಷ್ಠಿನಾ? ಎಲ್ಲದಕ್ಕೂ ಆಗ ಉತ್ತರ ಸಿಗಲಿದೆ.
ಆದರೆ ಬಿಜೆಪಿಯ ಧ್ವನಿ ಸುರುಳಿ ಬಿಡುಗಡೆಗೆ ಅತಿಥಿಯಾದರೂ ಬಿಜೆಪಿ ಮುಖಂಡರಾದಂತೆಯೇ ಲೆಕ್ಕ. ಏಕೆಂದರೆ ಅದು ಸಿನಿಮಾ ಕಾರ್ಯಕ್ರಮವಂತೂ ಆಗಿರುವುದಿಲ್ಲ. ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್`ನಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.



