ಬೆಂಗಳೂರಿನ ನಾಗರಿಕರಿಗೆ ಗುಡ್ ನ್ಯೂಸ್. ನೀರಿನ ಬಿಲ್ ಏರಿಕೆಯಾಗಲಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ಕೊಟ್ಟಿದ್ದಾರೆ. . ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಮಂಗಳವಾರ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯ ಬೆಂಗಳೂರು ಜಲಮಂಡಳಿಯ ಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಈವರೆಗೆ ನೀರು ಬಳಕೆ ಶುಲ್ಕ ಹೆಚ್ಚಳ ಮಾಡಿಲ್ಲ. ಹೀಗಾಗಿ ಜಲಮಂಡಳಿ ಆದಾಯ ತೀರಾ ಕಡಿಮೆಯಿದ್ದು, ನೀರಿನ ಶುಲ್ಕ ಹೆಚ್ಚಳ ಸೇರಿ ಜಲಮಂಡಳಿಯನ್ನು ಆರ್ಥಿಕವಾಗಿ ಸಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರೆ ಡಿಸಿಎಂ ಡಿಕೆಶಿವಕುಮಾರ್.
ಜಲಮಂಡಳಿಗೆ ವಾರ್ಷಿಕ 104 ಕೋಟಿ ಆದಾಯ ಬಂದರೆ 95 ಕೋಟಿ ವಿದ್ಯುತ್ ಬಿಲ್ ಪಾವತಿಗೇ ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಬೆಸ್ಕಾಂನಿಂದ ರಿಯಾಯಿತಿ ದರದಲ್ಲಿ ಜಲಮಂಡಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ. ಇದರಿಂದಾಗಿ ಬೃಹತ್ ಯೋಜನೆಗಳೆಲ್ಲವನ್ನೂ ಸಾಲ ಪಡೆದೇ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. ಈ ಎಲ್ಲವುಗಳನ್ನೂ ಗಮನಿಸಿ ನೀರಿನ ಬಿಲ್`ನ್ನು ಏರಿಕೆ ಮಾಡುವುದಾಗಿ ಡಿಕೆ ಶಿವಕುಮಾರ್ ಸುಳಿವು ಕೊಟ್ಟಿದ್ದಾರೆ.
ಈಗಾಗಲೇ ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದೊಡನೆ ವಿದ್ಯುತ್ ದರ ಏರಿಕೆಯಾಗಿದೆ. ಪ್ರತಿ ಯುನಿಟ್`ಗೆ 70 ಪೈಸೆ ಏರಿಕೆಯಾಗಿದ್ದು, ಇದರಲ್ಲಿ 57 ಪೈಸೆ ನಿಗದಿತ ಶುಲ್ಕ ಹಾಗೂ 13 ಪೈಸೆ ಇಂಧನ ಅರ್ಥಾತ್ ವಿದ್ಯುತ್ ಶುಲ್ಕ. ಮೀಟರ್ ಶುಲ್ಕ ಅಂದ್ರೆ ಮೀಟರ್ ಫಿಕ್ಸೆಡ್ ಚಾರ್ಜ್ ಏರಿಕೆಯಾಗಿದೆ. ಈಗ ನೀರಿನ ಬಿಲ್ ಸರದಿ.



