ಮಂಡ್ಯದ ಕೆ.ಆರ್. ಪೇಟೆ ತಾಲೂಕಿನಲ್ಲಿರೋ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಂಭ ಮೇಳಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ಮಲೆ ಮಹದೇಶ್ವರ ಸ್ವಾಮಿಯ ನೂತನ ದೇಗುಲ ಲೋಕಾರ್ಪಣೆಗೊಳಿಸಿ ನದಿಗೆ ಬಾಗಿನ ಸಮರ್ಪಿಸಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ಪಾದ ಸ್ಪರ್ಶ ಮಾಡಿರುವ ಪವಾಡ ಮೆರೆದಿರುವ ಪುಣ್ಯ ಕ್ಷೇತ್ರ ಈ ತ್ರಿವೇಣಿ ಸಂಗಮ.
ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಭಕ್ತರು ಪಾಲ್ಗೊಂಡು ಕಾವೇರಿ, ಹೇಮಾವತಿ, ಲಕ್ಷಣ ತೀರ್ಥ ನದಿಗಳ ಸಂಗಮದಲ್ಲಿ ಮಿಂದೇಳುತ್ತಿದ್ದಾರೆ. ತ್ರಿವೇಣಿ ಸಂಗಮದ ದಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿರುವ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿವೆ. ನಾವು ಕೆಲವು ಸಲ ಕೃತಜ್ಞತೆ ಸಲ್ಲಿಸವುದಕ್ಕಾಗಿ ಪೂಜೆ ಸಲ್ಲಿಸುತ್ತೇವೆ. ಪಂಚ ಭೂತಗಳಲ್ಲಿ ಜಲ ಬಹಳ ಮುಖ್ಯವಾದದ್ದು, ಜಲಕ್ಕೆ ನಾವು ಕೃತಜ್ಞತೆ ಹೇಳುವುದು ಹೇಗೆಂದರೆ ಅದನ್ನು ಅಮೂಲ್ಯವಾಗಿ ಬಳಸಬೇಕು ಎಂದರು.. ಸುತ್ತೂರು ಶ್ರೀ, ಆದಿಚುಂಚನಗಿರಿ ಶ್ರೀ, ಕಾಗಿನೆಲೆ ಶ್ರೀ, ಸಚಿವರಾದ ಅಶ್ವಥ್ ನಾರಾಯಣ್, ನಾರಾಯಣಗೌಡ, ಗೋಪಾಲಯ್ಯ, ಶಶಿಕಲಾ ಜೊಲ್ಲೆ ಮೊದಲಾದವರು ಪಾಲ್ಗೊಂಡಿದ್ದರು.

ಅ. 16 ರಂದು ಬೆಳಗ್ಗೆ 11 ಗಂಟೆಗೆ ಮಹಾ ಕುಂಭಮೇಳ ಸಮಾರೋಪ ಸಮಾರಂಭವನ್ನುಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉದ್ಘಾಟಿಸಲಿದ್ದಾರೆ. ಸಮಾರೋಪದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭಾಗಿಯಾಗಲಿದ್ದು, 16



